ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.

ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ – 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬುದು ವೀರ ಗಂಗಾಧರ ಅಜ್ಜಯ್ಯನ ವಾಣಿಯಾಗಿದೆ. ಅಜ್ಜಯ್ಯನ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಈ ಪವಿತ್ರವಾದ ನಮ್ಮ ಅಜ್ಜಯ್ಯನ ಜಾತ್ರೆಯ ಧರ್ಮಸಭೆಯಲ್ಲಿ ಪಾಲ್ಗೊಂಡಿರುವುದು ನಮ್ಮೆಲ್ಲರ ಭಾಗ್ಯ. 233ನೇ ವರ್ಷದ ವಾರ್ಷಿಕೋತ್ಸವ ಹಾಗೂ 18ನೇ ವರ್ಷದ ಪುಣ್ಯ ಆರಾಧನೆ ನಡೆಯುತ್ತಿದ್ದು, ಈ ವೇಳೆ ಗಂಗಾಧರ ಅಜ್ಜಯ್ಯನ ಪಾದಗಳಿಗೆ ನನ್ನ ಕೋಟಿ ನಮಸ್ಕಾರಗಳು.

ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ ಎಂಬ ಮಾತಿದೆ. ನಾನು ಡಿಸಿಎಂ ಆಗಿ ಅಲ್ಲ, ಈ ಮಠದ ಒಬ್ಬ ಭಕ್ತನಾಗಿ, ಶ್ರೀಗಳ ಶಿಷ್ಯನಾಗಿ, ಅಜ್ಜನ ಒಬ್ಬ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನನಗೂ ಅಜ್ಜಯ್ಯನಿಗೂ ಇರುವ ಸಂಬಂಧ ಹಾಗೂ ನಂಬಿಕೆ ಎಲ್ಲರಿಗೂ ಗೊತ್ತಿದೆ. ಅವರ ಮಾರ್ಗದರ್ಶನ ಹಾಗೂ ಶಕ್ತಿಯಿಂದಲೇ ಇಲ್ಲಿಯವರೆಗೂ ಬೆಳೆದುಕೊಂಡು ಬಂದಿದ್ದೇವೆ. ಈ ಮಠವನ್ನು ಇನ್ನೂ ಎತ್ತರಕ್ಕೆ ಬೆಳೆಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

About The Author