Wednesday, December 4, 2024

Latest Posts

‘ನಿಖಿಲ್‌ ಬಚ್ಚಾ, ಪಾಪ ನಿಖಿಲ್’ ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಮನಸ್ಥಿತಿಯವನಲ್ಲ ನಾನು: ನಿಖಿಲ್

- Advertisement -

Political News:  ಕಲೆದ ಉಪಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದು, ಈ ಬಗ್ಗೆ ಕೆಲವರು ಕೊಂಕು ಮಾತನಾಡಿದ್ದರು. ಈ ಕೊಂಕಿಗೆ ನಿನ್ನೆ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದರು. ಇಂದು ಸ್ವತಃ ನಿಖಿಲ್ ಕುಮಾರ್ ಟ್ವೀಟ್ ಮೂಲಕ, ಸೋತು ಸುಮ್ಮನೆ ಕೂರುವ ಮನಸ್ಥಿತಿಯವನು ನಾನಲ್ಲ ಎಂದು ಹೇಳಿದ್ದಾರೆ. ಅವರು ಬರೆದಿರುವ ಪತ್ರ ಈ ರೀತಿ ಇದೆ.

‘ಪಕ್ಷ ನನಗೆ ಟಾಸ್ಕ್‌ ಕೊಡಲಿ, ಕೇವಲ ಹದಿನೈದೇ ದಿನದಲ್ಲಿ ಜೆಡಿಎಸ್‌ ಪಕ್ಷವನ್ನು ಖಾಲಿ ಮಾಡಿಬಿಡುತ್ತೇನೆ’ ಎನ್ನುವ ದರ್ಪ, ಅಹಂಕಾರ ಆ ಗೆಲುವಿನಲ್ಲಿ ವ್ಯಕ್ತವಾದ ವಿಕೃತಿ. ನಮ್ಮ ಶಾಸಕರು ಕೇವಲ ಶಾಸಕರಾಗಿ ಅಥವಾ ರಾಜಕೀಯ ಉದ್ದೇಶಕ್ಕಾಗಿ ನಮ್ಮೊಂದಿಗಿಲ್ಲ. ಪಕ್ಷ ಮತ್ತು ಶಾಸಕರ ನಡುವೆ ರಕ್ತ ಸಂಬಂಧಕ್ಕಿಂತ ಮಿಗಿಲಾದ ಗಾಢ ಬಾಂಧವ್ಯವಿದೆ.ನಾಯಕರು- ಶಾಸಕರ ನಡುವೆ ಬಿಡಿಸಲಾಗದ ಭಾವನಾತ್ಮಕ ಬೆಸುಗೆ ಇದೆ. ಕೇವಲ ಸ್ವಾರ್ಥಕ್ಕಾಗಿ, ಅಧಿಕಾರದ ಹಪಾಹಪಿಗಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ, ಎಲ್ಲಿ ಹೆಚ್ಚು ಪ್ಯಾಕೇಜ್‌ ಸಿಕ್ಕಿದರೆ ಅಲ್ಲಿಗೆ ಹಾರಿ ಜೇಬು ಭರ್ತಿ ಮಾಡಿಕೊಳ್ಳುವ ರಾಜಕೀಯ ವ್ಯಾಪಾರಿಗಳಲ್ಲ ನಮ್ಮ ಶಾಸಕರು.

ಪಕ್ಷವನ್ನು ಮರಳಿ ಕಟ್ಟೋಣ, ಬೀದಿಯಲ್ಲಿ ನಿಂತು ಜನಪರವಾಗಿ ಹೊರಾಡೋಣ ಎಂದು ನನ್ನ ಕಾರ್ಯಕರ್ತ ಬಂಧುಗಳಿಗೆ ನಾನು ಮನವಿ ಮಾಡುತ್ತೇನೆ. ಗೆದ್ದಲು ಕಟ್ಟಿದ ಹುತ್ತದೊಳಕ್ಕೆ ಹಾವಿನಂತೆ ಹೊಕ್ಕು, ಕೈಹಿಡಿದವರನ್ನೇ ಕಚ್ಚಿ, ವಿಷಕಾರುವ ರಾಜಕೀಯ ವಿಷಜಂತುಗಳಿಗೆ ನಾವು ಹೆದರುತ್ತೇವೆಯೇ? ಇಲ್ಲ. ‘ನಿಖಿಲ್‌ ಬಚ್ಚಾ.. ಪಾಪ ನಿಖಿಲ್‌..’ ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು ಎಂದು ನಿಖಿಲ್ ಹೇಳಿದ್ದಾರೆ.

- Advertisement -

Latest Posts

Don't Miss