Wednesday, October 15, 2025

Latest Posts

‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬರಲಿ, ಯಾವುದೇ ಕ್ರಮ ಕೈಗೊಳ್ಳಲಿ, ನಾನು ರೆಡಿ’

- Advertisement -

Political News: ಡಿಸಿಎಂ ಡಿಕೆಶಿ, ಕುಮಾರಸ್ವಾಮಿಯವರು ವಿದ್ಯುತ್ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ, ಇದಕ್ಕೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್ ಮಾಡುವ ಮೂಲಕ, ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. * ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ

ಕಾಂಗ್ರೆಸ್ ಸರ್ಕಾರ ಇದನ್ನೇ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ. * ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ.

ಈ ರೀತಿಯಾಗಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್‌ರೆಸ್ ಸರ್ಕಾರದ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಲೋಕಸಭೆಗೆ ನಾನೂ ಆಕಾಂಕ್ಷಿ: ಬಸವರಾಜ ಗುರಿಕಾರ

1000ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಹಮಾಸ್ ಕಮಾಂಡರ್‌ ಹತ್ಯೆ..

3 ಲಕ್ಷ ರೂ. ಟೀ ಕಪ್‌ನೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ ನೀತಾ ಅಂಬಾನಿ

- Advertisement -

Latest Posts

Don't Miss