Sunday, December 22, 2024

Latest Posts

‘ನಾನು ಸಚಿವನಾಗಿ ನನಗೆ ಇನ್ನೂ ಲೋಕಸಭೆಗೆ ಹೋಗಲು ಆಗಿಲ್ಲ. ಹಾಗಾದರೆ ಇವನು ಹೇಗೆ ಹೋದ?’

- Advertisement -

Political News: ಧಾರವಾಡ: ಸಂತಸ್ ಭವನದಲ್ಲಿ ಗಲಾಟೆ ಮತ್ತುಅದು  ಕಾಂಗ್ರೆಸ್ ಕುತಂತ್ರ ಅಂತಾ ಆರೋಪಗಳ ವಿಚಾರದ ಬಗ್ಗೆ ಸಚಿವ ಜಮೀರ್ ಅಹಮದ್ ಮಾತನಾಡಿದ್ದು,  ಇದರಲ್ಲಿ ಕಾಂಗ್ರೆಸ್ ಕುತಂತ್ರ ಹೇಗಿರುತ್ತೆ? ಅವರಿಗೆ ಪಾಸ್ ಕೊಟ್ಟವರು ಯಾರು? ಇದರಲ್ಲಿ ರಾಜಕೀಯ ಮಾತನಾಡಲು ನಾನು ಇಷ್ಟಪಡುವುದಿಲ್ಲ. ಇದರಲ್ಲಿ‌ ಭದ್ರತಾ ವೈಫಲ್ಯ ಆಗಿದೆ. ಆತ ಪ್ರೇಕ್ಷಕರ ಗ್ಯಾಲರಿ ಮೇಲಿಂದ ಜಂಪ್ ಹೊಡೆದಿದ್ದಾರೆ. ಹೀಗಾದರೆ ಸೆಕ್ಯೂರಿಟಿ ವ್ಯವಸ್ಥೆ ಹೇಗಿದೆ ಅಲ್ಲಿ? ಎಂದು ಪ್ರಶ್ನಿಸಿದ್ದಾರೆ.

ಸಂಸತ್‌ನಲ್ಲಿ ಒಳಗೆ ಹೋಗಲು ಹತ್ತಾರು ಪ್ರಕ್ರಿಯೆ ಇದೆ. ಮಂತ್ರಿ, ಎಂಎಲ್‌ಗಳು ಸಂಸತ್‌ಗೆ ಹೋಗಲು ಅನೇಕ ಪ್ರಕ್ರಿಯೆ ಇವೆ. ಹಾಗಾದರೆ ಆ ಹುಡುಗ ಹೇಗೆ ಒಳಗೆ ಹೋದ. ಸಿಎಂ ಪ್ರಧಾನಿ ಭೇಟಿಯಾಗಬೇಕಾದರೂ ಅನೇಕ ಪ್ರಕ್ರಿಯೆ ಇವೆ. ನಾನು ಸಚಿವನಾಗಿ ನನಗೆ ಇನ್ನೂ ಲೋಕಸಭೆಗೆ ಹೋಗಲು ಆಗಿಲ್ಲ. ಹಾಗಾದರೆ ಇವನು ಹೇಗೆ ಹೋದ? ಎಂದು ಸಚಿವ ಜಮೀರ್ ಅಹಮದ್ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮೂರು ಕ್ಷೇತ್ರ ಮುಸ್ಲಿಂರಿಗೆ. ಮೂರು ಕ್ಷೇತ್ರಗಳಲ್ಲಿ ನಮ್ಮವರಿಗೆ ಟಿಕೆಟ್ ಕೇಳಿದ್ದೇನೆ.
ಎಲ್ಲ ಕ್ಷೇತ್ರಗಳಲ್ಲಿ ಲೋಕಸಭೆಗೆ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ನಮ್ಮ ಸರ್ಕಾರ ಬಂದ ಬಳಿಕ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಜನ ಈಗ ತೀರ್ಮಾನ ತೆಗೆದುಕೊಂಡು ಆಗಿದೆ. ಕನಿಷ್ಠ ನಾವು ರಾಜ್ಯದಲ್ಲಿ 25 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಮೂರು ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ಕೇಳಿದ್ದೇವೆ. ಬೆಂಗಳೂರು ಸೆಂಟ್ರಲ್, ಹಾವೇರಿ, ಬೀದರ್ ಕ್ಷೇತ್ರದ ಟಿಕೆಟ್ ಕೇಳಿದ್ದೇವೆ ಎಂದು ಜಮೀರ್ ಹೇಳಿದ್ದಾರೆ.

ಇನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಜಮೀರ್, ಪ್ರಸಾದ ಅಬಯ್ಯ ಅವರ ಅಭಿಪ್ರಾಯ ಹೇಳಿದ್ದಾರೆ. ಅವರ ಅಭಿಪ್ರಾಯ ಹೇಳಿರುವುದರಲ್ಲಿ ತಪ್ಪೇನಿದೆ? ಅಬ್ಬಯ್ಯ ಟಿಪ್ಪು ಮೇಲಿನ ಅಭಿಮಾನದಿಂದ ಹೇಳಿದ್ದಾರೆ ಎಂದರು.

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

- Advertisement -

Latest Posts

Don't Miss