Saturday, May 10, 2025

Latest Posts

ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ

- Advertisement -

Hassan News: ಹಾಸನ : ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದಲ್ಲಿ ಭಾಗಿಯಾಗಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು,  ಪ್ರತಿ ವರ್ಷ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸುತ್ತೇವೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಒಳ್ಳೆಯ ಮಳೆ, ಬೆಳೆ ಆಗಲಿ, ರೈತರಿಗೆ ಆರೋಗ್ಯ ಕೊಡಲಿ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ಅವರಿಗೆ ಎಲ್ಲರೂ ಮತ ಕೊಡಲಿ ಎಂದು ಕೇಳಿದ್ದೇನೆ. ಚುನಾವಣೆ ಸಂದರ್ಭ ಒಳ್ಳೆಯ ಕೆಲಸ ಮಾಡುವ ಶಕ್ತಿ ಕೊಡಲಿ‌ ಎಂದು ಬೇಡಿದ್ದೇನೆ ಎಂದಿದ್ದಾರೆ.

ಅಲ್ಲದೇ, ಪ್ರಜ್ವಲ್‌ ಅವರಿಗೆ ಎಂಟು ವಿಧಾನಸಭಾ ಕ್ಷೇತ್ರದಿಂದ ಅದ್ಭುತವಾದ ಲೀಡ್ ಬಂದು ಅತಿ ಹೆಚ್ಚಿನ ಮತಗಳಿಂದ ಗೆಲ್ಲಬೇಕು. ಕುಮಾರಸ್ವಾಮಿ ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ದೇವರಲ್ಲಿ ಕೇಳಿದ್ದೇನೆ. ಕುಮಾರಸ್ವಾಮಿ ಅವರಿಗೆ ಆರೋಗ್ಯ ಕೊಡಲಿ. ಹಾಸನ, ಮಂಡ್ಯ, ಕೋಲಾರ ಮೂರು ಕ್ಷೇತ್ರಗಳು ಗೆಲ್ಲಬೇಕು. ನಮ್ಮವೂ ಮೂರು ಸೇರಿ 28 ಕ್ಕೆ 28 ಗೆದ್ದು ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ ಎಂದಿದ್ದಾರೆ.

ಎಚ್.ಡಿ‌.ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ರೇವಣ್ಣ,  ಅದು ನನಗೆ ಗೊತ್ತಿಲ್ಲ, ಇವತ್ತು ಆಸ್ಪತ್ರೆಯಿಂದ ಬರ್ತಾರೆ ಎಂದು ಹೇಳಿದ್ದಾರೆ.

- Advertisement -

Latest Posts

Don't Miss