Thursday, October 16, 2025

Latest Posts

ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political News: ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ನಾನಾ ಯೋಜನೆಗಳ 23,000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ಸವಲತ್ತುಗಳನ್ನು ವಿತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಿಎಂ, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ತುಮಕೂರು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಲಿದೆ. ಆದಷ್ಟು ಶೀಘ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಸೂಚನೆ ನೀಡಿದ್ದೇನೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು.

ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ಒಡ್ಡಿರುವ ಸುದ್ದಿ ನೋಡಿದೆ. ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss