Thursday, September 25, 2025

Latest Posts

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

- Advertisement -

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದ್ದು, ಪ್ರಕರಣ ಸಂಬಂಧ ಈ ವರೆಗೂ 60 ಮಂದಿಯನ್ನು ಬಂದನಕ್ಕೂಳಪಡಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಐ ಲವ್‌ ಮುಹಮ್ಮದ್‌ ಎಂಬ ಪೋಸ್ಟ್‌ ಗೆ ಹಿಂದೂ ವ್ಯಕ್ತಿಯೊಬ್ಬ ಈ ಲವ್‌ ಮಹಾದೇವ್‌ ಎಂದು ಪೋಸ್ಟ್‌ ಹಂಚಿಕೊಂಡಿದ್ದರು. ಇದು ಈಗ ಗಲಭೆಗೆ ಕಾರಣವಾಗಿದೆ.

ಹಿಂದೂ ವ್ಯಕ್ತಿಯೊಬ್ಬ ಹಂಚಿಕೊಂಡ ಪೋಸ್ಟ್‌ನಿಂದಾಗಿ ಆಕ್ರೋಶಗೊಂಡ ಮುಸ್ಲಿಂ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಬಹಿಯಾಲ್‌ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಿ ಗಲಭೆ ನಡೆಸಿದೆ. ಪೋಸ್ಟ್‌ ಹಂಚಿಕೊಂಡ ಹಿಂದೂ ವ್ಯಕ್ತಿಯ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ವಸ್ತುಗಳನ್ನು ಹೊರಗೆಸೆದು ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಹಿಂದೂಗಳಿರುವ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.

ಇನ್ನು ದಾವಣಗೆರೆಯಲ್ಲಿ ಐ ಲವ್ ಮಹಮ್ಮದ್ ಎಂಬ ಬರಹದ ಫ್ಲೆಕ್ಸ್ ಬೋರ್ಡ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಗುಂಪುಗಳ ನಡುವೆ ನಡೆದ ವಾಗ್ವಾದ ಮತ್ತು ಗಲಾಟೆಯು ಕಲ್ಲು ತೂರಾಟದಂತಹ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಪೊಲೀಸರು ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss