Saturday, July 27, 2024

Latest Posts

ದಿಂಗಾಲೇಶ್ವರ ಶ್ರೀಗಳ ಮುನಿಸು ಕಡಿಮೆ ಮಾಡಲು ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ: ಮುರುಗೇಶ್ ನಿರಾಣಿ

- Advertisement -

Hubli News: ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ಮಾಡಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಹೇಳಲು ಅಸಾಧ್ಯ. ನಡೆದಿರುವ ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದೆ ನಡೆಯುವುದಾಗಿ ದಿಂಗಾಲೇಶ್ವರ ಶ್ರೀಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ನಾಯಕರು ಮನವರಿಕೆ ಮಾಡಿಕೊಡುವರು ಎಂದರು.

ದಿಂಗಾಲೇಶ್ವರ ಶ್ರೀಗಳು ರಾಜ್ಯದ ದೊಡ್ಡ ಮಠಾಧೀಶರಾಗಿರುವ ಕಾರಣ, ರಾಷ್ಟ್ರೀಯ ನಾಯಕರುಗಳು ಚರ್ಚೆ ನಡೆಸಿ, ಅವರನ್ನು ಸಮಾಧಾನ ಪಡಿಸುವರು. ಈ ನಿಟ್ಟಿನಲ್ಲಿ ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ ಎಂದು ಅವರು ಹೇಳಿದರು.

ವಚನಾನಂದ ಶ್ರೀಗಳು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಪಂಚಮಸಾಲಿಗಳಗೆ ನೀಡಿರುವ ಸ್ಥಾನಮಾನಗಳಿಗೆ ಸವಿವರವಾಗಿ ಬರುವ ಎಪ್ರಿಲ್ 14 ರಂದು ಹರಿಹರದ ಪಂಚಮಸಾಲಿ ಪೀಠದಲ್ಲಿ ನಡೆಯಲಿರುವ ವಿಶೇಷ ಸಭೆಯಲ್ಲಿ ಮನವರಿಕೆ ಮಾಡಿಕೊಡಲಾಗುವುದು. ಈ ಸಭೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಈಗಾಗಲೇ ವಚನಾನಂದ ಶ್ರೀಗಳು ಭೇಟಿಗೆ ಸಮಯ ಪಡೆಯಲಾಗಿದ್ದು, ಏಪ್ರಿಲ್ 14 ರ ಎಲ್ಲವೂ ಸರಿ ಹೋಗಲಿದೆ ಎಂದ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾವುದೇ ನಾಯಕರು ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದರು.

ಇಬ್ಬರು ಸೇರಿ ಪ್ರಚಾರವನ್ನು ನಿಲ್ಲಿಸಿಬಿಡೋಣ, ಯಾರು ಗೆಲ್ತಾರೆ ನೋಡೋಣ: ಜೋಶಿಗೆ ಲಾಡ್ ಸವಾಲ್‌

ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

- Advertisement -

Latest Posts

Don't Miss