BREAKING NEWS: KGF ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಸ್ಕ್ರಾಪ್ ಉದ್ಯಮದಲ್ಲಿ ಹೆಸರುವಾಸಿಯಾಗಿರುವಂತ ಕೆಜಿಎಫ್ ಬಾಬು ನಿವಾಸ, ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವಂತ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ 4 ಇನ್ನೋವಾ ಕಾರುಗಳಲ್ಲಿ ಆಗಮಿಸಿದಂತ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಬಾಬು ಒಡೆತನದ ರುಕ್ಸಾನಾ ಪ್ಯಾಲೇಸ್ ಮೇಲೆ ಕೂಡ ದಾಳಿ ನಡೆಸಿರುವಂತ ಐಟಿ ಅಧಿಕಾರಿಗಳು, ಆದಾಯ ತೆರಿಗೆ ವಂಚನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಪತ್ತೆ ಹಚ್ಚಿರೋದಾಗಿ ತಿಳಿದು ಬಂದಿದೆ.

About The Author