Sunday, April 13, 2025

Latest Posts

yatnal bjp ರಾಜ್ಯಾಧ್ಯಕ್ಷ ಅಲ್ಲ ಮುಖ್ಯಮಂತ್ರಿ ಆಗ್ತೇನೆ : ಯತ್ನಾಳ್.

- Advertisement -

BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕವನ್ನ ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲದೆ, ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದೇ ವಿಚಾರವಾಗಿ ನಮ್ಮ ಪ್ರಯತ್ನ ನಡೆಯುತ್ತಲೇ ಇರುತ್ತದೆ ಎಂದು ಸ್ಪಷ್ಟಣೆ ನೀಡಿದ್ದಾರೆ.

ದೆಹಲಿಗೆ ಹೋಗುವ ವಿಚಾರವಾಗಿ ಮಾತನಾಡಿದ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಗೃಹ ಪ್ರವೇಶವಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇವೆ. ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದೇವೆ. ನಮಗೆ ಗೆಲುವು ಸಿಗುವವರೆಗೂ ಪ್ರಯತ್ನಿಸುತ್ತಲೇ ಇರುತ್ತೇವೆ. ನಮ್ಮ ಹೋರಾಟ ಪಕ್ಷದ ವಿರುದ್ಧವಲ್ಲ, ಕುಟುಂಬ ರಾಜಕೀಯ ಮತ್ತು ಭ್ರಷ್ಟಾಚಾರದ ವಿರುದ್ಧ. ಬಿಜೆಪಿಯ ಕ್ಲೀನ್ ಇಮೇಜ್‌ನಿಂದಾಗಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ಕೇಜ್ರಿವಾಲ್‌ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಕಾರಣದಿಂದಲೇ ಅವರಿಗೆ ಸೋಲಿಗೆ ದೆಹಲಿಯಲ್ಲಿ ಜನ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ.

ಪಕ್ಷದಲ್ಲಿ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಒಡೆದ ಮನಸುಗಳನ್ನು ಒಂದು ಮಾಡಲು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ರಾಜ್ಯ ಪ್ರವಾಸ ಮಾಡುತ್ತಿರುವ ಕುರಿತು ಯತ್ನಾಳ್ ಉತ್ತರಿಸಿದ್ದು , ಇದು ಒಳ್ಳೆಯ ನಿರ್ಧಾರ ಅದನ್ನು ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ.
ಇತ್ತೀಚಿನ ದೆಹಲಿ ಭೇಟಿ ಬಗ್ಗೆ ಹೇಳಿದ ಅವರು ನಮಗೆ ಏನೂ ಅವಮಾನ ಆಗಿಲ್ಲ. ನಾವು ಇನ್ನೂ ಗಟ್ಟಿಯಾಗಿದ್ದೇವೆ. ನಾವು ವಿಜಯದ ಸಂಕೇತ ಇಟ್ಟುಕೊಂಡು ಬಂದಿದ್ದು, ವರಿಷ್ಠರು ಏನು ಹೇಳಬೇಕೋ ಹೇಳಿದ್ದಾರೆ. ಕೇಂದ್ರ ಬಿಜೆಪಿ ನಾಯಕರು ನಮ್ಮ ಸಮಸ್ಯೆಗೆ ಸ್ಪಂದಿಸಿದ್ದಾರೆ. ನಾವು ಅಲ್ಲಿ ಯಾರನ್ನು ಭೇಟಿಯಾದೆವು ಎಂಬುದನ್ನು ಗುಟ್ಟಾಗಿ ಇಡುವಂತೆ ಕೇಂದ್ರದ ನಾಯಕರು ನಮಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ

- Advertisement -

Latest Posts

Don't Miss