Political news: ಮಂಡ್ಯದ ಮಾಜಿ ಸಂಸದ ಮತ್ತು ಮಾಜಿ ಶಾಸಕ ಶಿವರಾಮೇಗೌಡ, ತಾವು ಮಗನೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು.
ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಸನದಲ್ಲಿ, ಚನ್ನಪಟ್ಟಣದಲ್ಲಿ ಸಮಾವೇಶ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಸೇರಬೇಕು ಎಂದುಕೊಂಡೆ, ಧನುರ್ಮಾಸ ಮುಗಿಯಲಿ, ಬಳಿಕ ಸೇರಿ ಎಂದು ಮನೆಯಲ್ಲಿ ಸಲಹೆ ನೀಡಿದರು. ಈ ಕಾರಣಕ್ಕೆ ಧನುರ್ಮಾಸ ಮುಗಿದ ಬಳಿಕ, ನಾನು ಮಗನೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಹೇಳಿದರು.
ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ನಾನು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇ, ಕಾಂಗ್ರೆಸ್ ಪಕ್ಷದ ಮೂಲಕ. ಬಳಿಕ ಕಾರಣಾಂತರಗಳಿಂದ ಬೇರೆ ಬೇರೆ ಪಕ್ಷಗಳಿಗೆ ಹೋಗಬೇಕಾಯಿತು. ಈಗ ಕಾಂಗ್ರ್ೆಸ್ ಪಕ್ಷ ಸೇರುತ್ತೇನೆ. ಕೊನೆಯವರೆಗೂ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನಿಂದ ಆದಷ್ಟು ಜನ ಸೇವೆ ಮಾಡುತ್ತೇನೆ ಎಂದು ಶಿವರಾಮೇಗೌಡ ಹೇಳಿದ್ದಾರೆ.




