ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ T20 ವಿಶ್ವಕಪ್ನ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಸೂಪರ್ ಪಂದ್ಯಗಳು ಪ್ರಾರಂಭಗೊಳ್ಳಲಿದೆ. ಆದರೆ ಟೂರ್ನಿ ಮಧ್ಯೆದಲ್ಲೇ ಮ್ಯಾಚ್ ಫಿಕ್ಸಿಂಗ್ನ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ.
ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ನಂತಹ ವಿಷಯಗಳು ಐಸಿಸಿಗೆ ಇನ್ನೂ ದೊಡ್ಡ ತಲೆನೋವಾಗಿ ಕಾಡುತ್ತಿವೆ. ಟಿ20 ವಿಶ್ವಕಪ್ ನಲ್ಲಿ ಮತ್ತೊಮ್ಮೆ ಈ ವಿಚಾರ ಬೆಳಕಿಗೆ ಬಂದಿದೆ. ಅಪರಿಚಿತ ಸಂಖ್ಯೆಯಿಂದ ತನಗೆ ಹಲವಾರು ಕರೆಗಳು ಬಂದಿವೆ ಎಂದು ಉಗಾಂಡಾದ ಆಟಗಾರನೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ದೂರು ನೀಡಿದ್ದಾನೆ. ಕೀನ್ಯಾದ ಮಾಜಿ ಕ್ರಿಕೆಟಿಗನೊಬ್ಬ ಉಗಾಂಡ ಆಟಗಾರನಿಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ ಫಿಕ್ಸಿಂಗ್‌ಗೆ ಮುಂದಾಗಿರುವುದು ಬಹಿರಂಗವಾಗಿದೆ. ಆದರೆ, ಐಸಿಸಿಯ ಭ್ರಷ್ಟಾಚಾರ ನಿಗ್ರಹ ಘಟಕ ಈ ವಿಷಯವನ್ನು ತಕ್ಷಣವೇ ಇತ್ಯರ್ಥಪಡಿಸಿದೆ.
ಗಯಾನಾದಲ್ಲಿ ನಡೆದ ವಿಶ್ವಕಪ್ ಲೀಗ್ ಹಂತದ ಪಂದ್ಯಗಳ ವೇಳೆ ಈ ಘಟನೆ ನಡೆದಿದ್ದು, ಕೀನ್ಯಾದ ಮಾಜಿ ವೇಗಿಯೊಬ್ಬರು ಉಗಾಂಡ ತಂಡದ ಆಟಗಾರನನ್ನು ವಿವಿಧ ಮೊಬೈಲ್ ನಂಬರ್‌ಗಳಿಂದ ಪದೇ ಪದೇ ಸಂಪರ್ಕಿಸಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಗಾಂಡಾದ ಆಟಗಾರ ತಕ್ಷಣವೇ ಐಸಿಸಿಯ ಭ್ರಷ್ಟಾಚಾರ ವಿರೋಧಿ ನೀತಿಯನ್ನು ಅನುಸರಿಸಿದ್ದು, ತಕ್ಷಣವೇ ಎಸಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಉಗಾಂಡ T20 ವಿಶ್ವಕಪ್‌ನಲ್ಲಿ ಪಪುವಾ ನ್ಯೂಗಿನಿ ವಿರುದ್ಧ ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಿತು. ಆದರೆ ನಂತರದ ಪಂದ್ಯಗಳಲ್ಲಿ ಅಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.