ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ.
ಇಂದು ನಗರದಲ್ಲಿ ರಾಹುಲ್ ಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರೋದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಸಿರ್ಸಿ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವ್ಯಾಪಕ ಸ್ವರೂಪ ಪಡೆಯುತ್ತಿದ್ದಂತೇ, ಪೊಲೀಸರು ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಬಂಧಿಸಿದ್ರು.
ಈ ಪ್ರತಿಭಟನೆಯ ವೇಳೆ ಮಾತನಾಡಿದಂತ ಶಾಸಕ ಜಮೀರ್ ಅಹ್ಮದ್ ಖಾನ್, ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿಯವರು ಚಿತ್ರಹಿಂಸೆ ನೀಡುತ್ತಿದ್ದಾರೆ. 2002ರಲ್ಲಿಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಆದ್ರೇ ಇದೇ ಪ್ರಕರಣವನ್ನು ರೀ ಓಪನ್ ಮಾಡಿ, ಬೇಕಂತಲೇ ವಿಚಾರಣೆ ನಡೆಸುತ್ತಿದೆ ಎಂದು ಕಿಡಿಕಾರಿದರು.
ಇಡಿ ಸತತ ಐದು ದಿನಗಳಿಂದ ನಮ್ಮ ನಾಯಕರನ್ನು ಬೇಕೆಂದೇ ವಿಚಾರಣೆ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸೋದಕ್ಕೆ ಇಷ್ಟು ದಿನ ಬೇಕಾ.? ಇಂದು ಉದ್ದೇಶ ಪೂರಿತ ಹುನ್ನಾರವಾಗಿದೆ. ಮುಂಬರುವ ಚುನಾವಣೆಯ ದೃಷ್ಠಿಯಿಂದ ಹೀಗೆ ಇಡಿ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು.
ದೇಶಾದ್ಯಂತ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ರಾಹುಲ್ ಗಾಂಧಿಯವರಿಗೆ ಎಲ್ಲಿಯವರೆಗೆ ಕಿರುಕುಳ ನೀಡೋದು ನಿಲ್ಲಿಸೋದಿಲ್ಲವೇ ನಮ್ಮ ಹೋರಾಟಾ ಕೂಡ ನಿಲ್ಲೋದಿಲ್ಲ ಎಂಬುದಾಗಿ ತಿಳಿಸಿದರು.