Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ ಹೇಳಿದ್ದಾರೆ.
ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲಾ ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ. ಸಧ್ಯದ ವ್ಯವಸ್ಥೆ ಸರಿಪಡಿಸಬೇಕು. ನೋ ಪ್ರಾಪಿಟ್ , ನೋ ಲಾಸ್ ನಲ್ಲಿ ಸಂಸ್ಥೆ ನಡೆಯಬೇಕು. ಐದು ಗ್ಯಾರಂಟಿ ಜನರಿಗೆ ಉಪಯೋಗ ಆಗುತ್ತಿದೆ. ನಮ್ಮ ಯೋಜನೆಗಳನ್ನ ಯಾರು ವಿರೋಧ ಮಾಡುತ್ತಿದ್ದರು ಅವರೇ ನಮ್ಮನ್ನ ಕಾಪಿ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಡೆತಡೆ ಸಹಜ ಆದರೆ ಸಿದ್ದರಾಮಯ್ಯ ಪಾರದರ್ಶಕವಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆಡಳಿತದ ಪರ ರಾಜು ಕಾಗೆ ಬ್ಯಾಟ್ ಬೀಸಿದ್ದಾರೆ.
ಹನಿಟ್ರ್ಯಾಪ್ ಅದು ವೈಯಕ್ತಿಕ, ಅದು ಸರ್ಕಾರದ ಯೋಜನೆ ಅಲ್ಲ. ಸದನದಲ್ಲಿ ರಾಜಣ್ಣ ಅವರ ಹೆಸರು ತೆಗೆದುಕೊಂಡಿದ್ದು ಯತ್ನಾಳ್. ಅದಕ್ಕೆ ರಾಜಣ್ಣ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ರಾಜು ಕಾಗೆ ಹೇಳಿದ್ದಾರೆ.