Tuesday, April 15, 2025

Latest Posts

ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಆಗಿದ್ದರೇ, ಬಿಜೆಪಿ ಶಾಸಕ ಬಿಡಿಸಿಕೊಂಡು ಬಂದಿದ್ದೇಕೆ.? – ಕಾಂಗ್ರೆಸ್

- Advertisement -

ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ.

ಈ ಕುರಿತಂತೆ ಟ್ವಿಟ್ ಮಾಡಿದ್ದು, ಬಿಜೆಪಿ ಹೇಳುವ ಸುಳ್ಳುಗಳಿಗೆ ‘ಸತ್ಯ’ವೇ ಕಂಗೆಟ್ಟು ದೇಶ ಬಿಟ್ಟು ಓಡಿ ಹೋಗಲಿದೆ! ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್‌ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ. ಈ ವ್ಯಕ್ತಿಯೊಂದಿಗೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ? ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? ಎಂದು ಪ್ರಶ್ನಿಸಿದೆ.

- Advertisement -

Latest Posts

Don't Miss