Saturday, July 27, 2024

Latest Posts

ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ: ಸಿಎಂ ಸಿದ್ದರಾಮಯ್ಯ

- Advertisement -

Political News: ಮೈಸೂರು- ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸ್ಪರ್ಧಿಸುತ್ತಿದ್ದು, ಲಕ್ಷ್ಮಣ್ ಪರ ಇಂದು ಸಿಎಂ ಸಿದ್ದರಾಮಯ್ಯ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಲಕ್ಷ್ಮಣ್ ಒಕ್ಕಲಿಗರೇ ಅಲ್ಲ ಎನ್ನುವ ಸುಳ್ಳುಸುದ್ದಿ ಹರಡಿಸಿದ್ದಾರೆ. ಎಂ.ಲಕ್ಷ್ಮಣ್ ಅವರು ಒಕ್ಕಲಿಗರಾಗಿ ಹುಟ್ಟಿ ವಿಶ್ವ ಮಾನವರಾಗುವ ಹಾದಿಯಲ್ಲಿ ನಡೆಯುತ್ತಾ ಕುವೆಂಪು ಆಶಯವನ್ನು ಪಾಲಿಸುತ್ತಿದ್ದಾರೆ. ಇಲ್ಲಿ ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ ಎಂದಿದ್ದಾರೆ.

ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನದ್ರೋಹಕ್ಕೆ ಪಾಠ ಕಲಿಸಿ ಎಂದು ನಾಡಿನ ಜನರಲ್ಲಿ ಕೈಮುಗಿದು ಮನವಿ ಮಾಡುತ್ತೇನೆ. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ. ನಾವು ಜನರ ಭಾವನೆಗಳನ್ನು ಕೆರಳಿಸುವುದಿಲ್ಲ, ಬದಲಿಗೆ ಭಾವನೆಗಳನ್ನು ಗೌರವಿಸುತ್ತಲೇ ಜನರ ಬದುಕನ್ನು ಸುಧಾರಿಸಲು ಕಾರ್ಯಕ್ರಮ ರೂಪಿಸುತ್ತೇವೆ. ಜನರಿಗೆ ಬದುಕು ಮುಖ್ಯ. ಬೆಲೆ ಏರಿಕೆ ಕಾರಣಕ್ಕೆ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಭಾಗ್ಯಗಳ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರಿಂದ ಪ್ರತೀ ಫಲಾನುಭವಿ ಕುಟುಂಬಕ್ಕೆ ತಿಂಗಳಿಗೆ ₹4-5 ಸಾವಿರ ಉಳಿತಾಯ ಆಗುತ್ತಿದೆ. ಇದರಿಂದ ಜನರ ಬದುಕಿನ ಸಂಕಷ್ಟ ಕಡಿಮೆಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್

ಶೋಭಾ ಕರಂದ್ಲಾಜೆ ಕನಸ್ಸು ಕಾಣುತ್ತಿದ್ದಾರೆ, ನಿದ್ರೆಯಿಂದ ಎದ್ದಿಲ್ಲ. ಅವರನ್ನು ಎಚ್ಚರಿಸಬೇಕು: ಪ್ರೊ.ರಾಜೀವ್ ಗೌಡ

ವೆಂಕಟರಮಣಸ್ವಾಮಿ ಮೋದಿ, ನಾಮ ಜೆಡಿಎಸ್ ಪಕ್ಷ ಇದ್ದ ಹಾಗೆ: ಶಾಸಕ ಸಮೃದ್ಧಿ ಮಂಜುನಾಥ್

- Advertisement -

Latest Posts

Don't Miss