ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.

ಕರಾವಳಿ ಭಾಗಕ್ಕೆ ಭೇಟಿ ನೀಡಿದ ವಿಷಯದ ಬಗ್ಗೆ ಬಿಜೆಪಿಗರು ವ್ಯಂಗ್ಯವಾಡಿದ್ದು ಈ ಬಗ್ಗೆ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕರಾವಳಿ ಭಾಗದ ಜನರ ಆಶಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಆದರೆ ಜನರ ಸಮಸ್ಯೆಗಳನ್ನು ಆಲಿಸಲು, ಪರಿಹಾರ ಕಂಡುಕೊಳ್ಳಲು ಸರ್ಕಾರ ಕೈಗೊಂಡಿರುವ ಈ ಪ್ರಯತ್ನವನ್ನೇ ಬಿಜೆಪಿಯವರು ಟೀಕಿಸುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕವಾಗಲಿ, ಕರಾವಳಿಯಾಗಲಿ, ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಮತ್ತು ಪ್ರಬುದ್ಧತೆ ಇದ್ದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ. ಜನರಲ್ಲಿ ಈ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ.

ಸರ್ಕಾರವೇ ಜನರ ಮನೆಬಾಗಿಲಿಗೆ ಬಂದು ಸಮಸ್ಯೆಗಳಿಗೆ ಪರಿಹಾರ ನೀಡುವುದು ತಪ್ಪೇ? ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಲೋಕಾರ್ಪಣೆ ಮಾಡುವುದು ತಪ್ಪೇ? ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ.

ನಮ್ಮ ಸರ್ಕಾರ ರಾಜಕೀಯಕ್ಕಿಂತ ಜನರ ಹಿತಕ್ಕೆ ಆದ್ಯತೆ ನೀಡಿ, ಪ್ರಾಮಾಣಿಕವಾಗಿ ಕೆಲಸ ಮಾಡುವುದರಲ್ಲಿ ನಿರತವಾಗಿರಲಿದೆ ೆಂದು ಗೃಹಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

About The Author