Political News: ಆರ್ಸ್‌ಎಸ್ ವಿರುದ್ಧ ಯಾರೇ ಮಾತನಾಡಿದಾಗಲೂ ಬಿಜೆಪಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತದೆ. ಅದೇ ವಿಷಯದ ಬಗ್ಗೆ ವ್ಯಂಗ್ಯವಾಡಿರುವ ಗೃಹಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ಗಲಿಬಿಲಿಗ“ಂಡರೆ ಬಿಜೆಪಿ ಬುಸುಗೂಡುತ್ತದೆ ಎಂದಿದ್ದಾರೆ.
ಪ್ರತಿ ಬಾರಿ ಯಾರಾದರೂ ಆರೆಸ್ಸೆಸ್ ಅನ್ನು ಪ್ರಶ್ನಿಸಿದಾಗ, ಬಿಜೆಪಿ ತನ್ನ ಸ್ಥಿಮಿತತೆಯನ್ನು ಕಳೆದುಕೊಳ್ಳುತ್ತದೆ.
ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡದ ಸಂಘಟನೆ, ಇಂದು ರಾಷ್ಟ್ರಕ್ಕೆ ದೇಶಪ್ರೇಮದ ಪಾಠ ಹೇಳುವುದೇಕೆ ಎಂದು ಪ್ರಶ್ನಿಸಿದರೆ, ಬಿಜೆಪಿ ಸಿಟ್ಟಿನಿಂದ ಬುಸುಗುಡುತ್ತದೆ.
ನಾಗಪುರದಲ್ಲಿ ತ್ರಿವರ್ಣ ಧ್ವಜ ಹಾರಿಸಲು 52 ವರ್ಷಗಳೇಕೆ ಬೇಕಾಯಿತು ಎಂದು ಪ್ರಶ್ನಿಸಿದರೆ, ಬಿಜೆಪಿ ಕೋಪದಿಂದ ಬುಸುಗುಡುತ್ತದೆ. ಅವರು ನಿಜಕ್ಕೂ ಯಾವ ಸಂವಿಧಾನಕ್ಕೆ ಬದ್ಧರಾಗಿರುತ್ತಾರೆ? ಬಾಬಾಸಾಹೇಬರು ಬರೆದ ಸಂವಿಧಾನಕ್ಕೋ, ಅಥವಾ ತಾವೇ ಬರೆಯಬೇಕಿತ್ತು ಎಂದು ಬಯಸುವ ಸಂವಿಧಾನಕ್ಕೋ ಎಂದು ಕೇಳಿದರೆ, ಬಿಜೆಪಿ ಸಿಟ್ಟಿನಿಂದ ಪೂತ್ಕರಿಸುತ್ತದೆ.
ಅವರು ನೋಂದಣಿ ಮಾಡಿಕೊಳ್ಳುವುದನ್ನು, ತೆರಿಗೆ ಪಾವತಿಸುವುದನ್ನು ಏಕೆ ನಿರಾಕರಿಸುತ್ತಾರೆ ಎಂದು ಪ್ರಶ್ನಿಸಿದರೆ, ಬಿಜೆಪಿ ಸಿಟ್ಟಿನಿಂದ ಬುಸುಗುಡುತ್ತದೆ. ಆರೆಸ್ಸೆಸ್ ತನ್ನ ಉಪದೇಶಗಳನ್ನು ಮೊದಲು ತಾನು ಅನುಸರಿಸಲಿ ಎಂದು ಕೇಳಿದರೆ, ಬಿಜೆಪಿ ಆಕ್ರೋಶದಿಂದ ಪೂತ್ಕರಿಸುತ್ತದೆ.
ಬಿಜೆಪಿ ಎಂದಿಗೂ ಆರ್‌ಎಸ್‌ಎಸ್‌ಗೆ ಕೇವಲ ಮಿತ್ರನಾಗಿರಲಿಲ್ಲ; ಅದು ಎಂದಿಗೂ ಆರೆಸ್ಸೆಸ್‌ನ ಸಾಧನವಾಗಿಯೇ ಇದೆ. ಪ್ರತಿ ಬಾರಿ ಬುಸುಗುಡುವಾಗಲೂ, ಹಾವಿನ ಬಾಲ ಯಾರ ಕೈಯಲ್ಲಿದೆ ಎಂಬುದನ್ನು ಖಚಿತಪಡಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿ ಬಗ್ಗೆ ಗೇಲಿ ಮಾಡಿದ್ದಾರೆ.




