Thursday, November 21, 2024

Latest Posts

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

- Advertisement -

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಲೇ ಇದೆ. ಇಷ್ಟು ದಿನ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೆಸರುಗಳು ಕೇಳಿಬಂದಿದ್ದವು. ಆದ್ರೀಗ ಅಚ್ಚರಿ ಎಂಬಂತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರೇ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದಿರೋ ಆರ್.ವಿ.ದೇಶಪಾಂಡೆ ಟಾಂಕ್ ಕೊಟ್ಟಿದ್ದಾರೆ. ಈ ಹಿಂದೆ ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂದಿದ್ದಾರೆ.

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಸಿಎಂ ಆಗಬೇಕು. ನನಗೆ ಸಿಎಂ ಆಗುವ ಆಸೆ ಇದೆ. ಈಗ ಸಿಎಂ ಬದಲಾವಣೆ ಆಗುವೇ ಪ್ರಶ್ನೆಯೇ ಇಲ್ಲ. ಜೀವನದಲ್ಲಿ ಮಹತ್ವಕಾಂಕ್ಷಿ ಇರಬೇಕು. ಸಿದ್ದರಾಮಯ್ಯಗಿಂತ ನಾನು ಎರಡು ವರ್ಷ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ರು, ಸಿದ್ದು ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. ಅವರು 5 ವರ್ಷ ಸಿಎಂ ಆಗಿರ್ತಾರೆ. ಮುಡಾ ಹಗರಣದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ? ಸಾವಿರಾರು ಕೋಟಿ ಹಗರಣ ಅಂತಾ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ದೇಶಪಾಂಡೆ ಹೇಳಿದ್ದಾರೆ.

ದೇಶಪಾಂಡೆ ಸಿಎಂ ಆಕಾಂಕ್ಷಿ ಹೇಳಿಕೆ ಬೆನ್ನಲ್ಲೇ ಬಿಜೆಪಿ ಶಾಸಕ ಯತ್ನಾಳ್ ಅವರು ಕಾಂಗ್ರೆಸ್​​ಗೆ ಟಾಂಗ್​ ಕೊಟ್ಟಿದ್ದಾರೆ. ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಈಗ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಆಗುವ ಆಕಾಂಕ್ಷಿಗಳ ಪಟ್ಟಿ ಸೇರ್ಪಡೆಯಾಗಿದ್ದಾರೆ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ದುಡಿಯುವುದಕ್ಕಿಂತ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವವರೇ ಹೆಚ್ಚಾಗಿದ್ದಾರೆ. ಆಡಳಿತ, ಕಾನೂನು ಸುವ್ಯವಸ್ಥೆ ನಿಷ್ಕ್ರಿಯವಾಗಿದೆ. ಇದು ಈ ಸರ್ಕಾರದ ಕಥೆ, ವ್ಯಥೆ ಎಂದು ಯತ್ನಾಳ ಲೇವಡಿ ಮಾಡಿದ್ದಾರೆ.

ಒಟ್ನಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಸಿಎಂ ಭಾರೀ ಫೈಟ್ ನಡೆದಿದೆ. ಇನ್ನೊಂದೆಡೆ ಪ್ರಾಸಿಕ್ಯೂಷನ್​ನಿಂದ ಪಾರಾಗಲು ಸಿಎಂ ಸಿದ್ದರಾಮಯ್ಯ ಟೆಂಪಲ್​ ರನ್​ನಲ್ಲಿ ಬ್ಯುಸಿಯಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿಕೊಟ್ಟಿರೋ ಸಿಎಂ, ಸಂಜೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಯ ದರ್ಶನ ಪಡೆಯಲಿದ್ದಾರೆ.

- Advertisement -

Latest Posts

Don't Miss