Sunday, September 8, 2024

Latest Posts

ಸಿಎಂ ಬದಲಾದರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ

- Advertisement -

www.karnatakatv.net : ರಾಯಚೂರು : ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ , ಸಿಎಂ ಬದಲಾದರೆ ಎಂದು ರಂಭಾಪುರಿ ಪೀಠದ ಜಗದ್ಗುರು ಮಾತನಾಡಿದರು .ಇಂದು  ರಾಯಚೂರಿನಲ್ಲಿ  ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಮಾದ್ಯಮದವರೊಂದಿಗೆ ಮಾತನಾಡಿದ ಸ್ವಾಮಿಗಳು ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ.

ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ ಆಗಿ ಇರುತ್ತಾರೆ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದ್ರೆ ಬಿಜೆಪಿ ಪಕ್ಷಕ್ಕೆ ದೊಡ್ಡ ಹೊಡೆತ ಬಿಳುತ್ತೆ ಎಂದರು. ಯಡಿಯೂರಪ್ಪ ‌ಇಳಿಯ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪಗೆ ಎಲ್ಲಾ ಜನಾಂಗದವರು ಬೆಂಬಲ ಕೊಟ್ಟಿದ್ದಾರೆ.

ಬಿಎಸ್ ವೈ  ಜನಪರ ಕಾಳಜಿ ಬಗ್ಗೆ ಯಾರು ಅಲ್ಲೆಗಳೆಯುವಂತೆ ಇಲ್ಲ. ಡಾ.ವೀರಸೋಮೇಶ್ವರ ಭಾಗವತ್ಪಾದರು ಹೇಳಿಕೆ ನಾವು ಅಷ್ಟೇ ಅಲ್ಲ ಸುತ್ತೂರು ಶ್ರೀಗಳು, ಆದಿಚುಂಚನಗಿರಿಯವರು ಸಹ ಬೆಂಬಲ ಸೂಚಿಸಿದ್ದಾರೆ ಎಂದು ಶ್ರೀಗಳು ತಿಳಿಸಿದರು.

- Advertisement -

Latest Posts

Don't Miss