Political News: ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಕೊಡಿ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿ ಪಕ್ಷದ ಯೋಚನೆ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ಮೋದಿ ಅವರು ತಮ್ಮ ಈ ಯೋಚನೆಯನ್ನು ಅನಂತ್ ಕುಮಾರ್ ಹೆಗಡೆ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅನಂತ ಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ ಬಿಜೆಪಿ ಪಕ್ಷದ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ. “ಹೆಗಡೆ ಹೇಳಿರುವುದನ್ನೇ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ 5 ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕಾಗಿ ಹಿಂದುತ್ವ ಅಪಾಯದಲ್ಲಿದೆ ಎಂಬ ಹುಸಿಭೀತಿಯನ್ನು ಜನರಲ್ಲಿ ಹುಟ್ಟಿಸಿ ಕೋಮುಭಾವನೆಯನ್ನು ಕೆರಳಿಸಿ ಮತಗಳ ಧ್ರುವೀಕರಣಗೊಳಿಸುವುದು ಅವರ ಉದ್ದೇಶವಾಗಿದೆ. ಹೆಗಡೆ ಅವರಿಗೆ ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿ ಪಕ್ಷವನ್ನೇ ಯಾಕೆ ಪ್ರಧಾನಿ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂದು ಸಿಎಂ ಹೇಳಿದ್ದಾರೆ.
ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ
ಮಂಡ್ಯದಲ್ಲಿ ಮುಂದಿನ ವರ್ಷದ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ