Tuesday, March 18, 2025

Latest Posts

ಜೈನ್ ಧರ್ಮದ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೆ ಸಲ್ಲೇಖನ ವೃತ, ಕಣ್ಣೀರು ಹಾಕಿದ ರಾಷ್ಟ್ರಸಂತ..!

- Advertisement -

Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ ಅಭಿಯಾನ ನಡೆಯಲಿದೆ. ವರೂರು ನವಗ್ರಹ ತೀರ್ಥಕ್ಷೇತ್ರದ ರಾಷ್ಟ್ರಸಂತ ಯುವಾಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಈ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ.

ಜೈನ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಕೂಡ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಜೈನ ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಭರವಸೆ ನೀಡಿತ್ತು. ಆದ್ರೆ, ಇದುವರೆಗೆ ಮೂರು ಬೇಡಿಕೆಗಳು ಮಾತ್ರ ಈಡೇರಿವೆ. ನಿಗಮ-ಮಂಡಳಿ ಸೇರಿದಂತೆ ಇನ್ನೂ ನಾಲ್ಕು ಬೇಡಿಕೆಗಳು ಬಾಕಿ ಉಳಿದಿವೆ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ನಿಗಮ-ಮಂಡಳಿ ರಚನೆಯ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ಸರ್ಕಾರದ ಈ‌ ನಿರೀಕ್ಷೆ ಹುಸಿಯಾಗಿದೆ. ಬುಧವಾರ ಬೆಳಿಗ್ಗೆ ಸಚಿವ ಜಮೀರ ಅಹ್ಮದ್ ಅವರನ್ನು ಭೇಟಿಯಾಗಿ, ನಿಗಮ- ಮಂಡಳಿ ರಚನೆಗೆ ಮನವಿ ನೀಡಲಾಗುತ್ತದೆ.

ಎಲ್ಲ ಸಚಿವರನ್ನು ಭೇಟಿಯಾಗಿ, ಸಮಾಜದ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಲಾಗುವುದು. ಸರ್ಕಾರ ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ಮಾಡಿದರೆ, ಜೂ.8ರಂದು ಅಥಣಿ ತಾಲೂಕಿನ ಐನಾಪೂರದಲ್ಲಿ ಸಮಾಜದ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ಆಯೋಜಿಸಲಾಗುವುದು. ಸರ್ಕಾರ ನಿರ್ಲಕ್ಷ್ಯ ಮುಂದುವರೆಸಿದರೆ ಬೆಂಗಳೂರಿನ ವಿಧಾನಸೌಧದ ಎದುರು ಅನ್ನ, ನೀರು ತ್ಯಜಿಸಿ ಸಲ್ಲೇಖನ ವೃತ ಕೈಗೊಳ್ಳುವುದಾಗಿ ಗುಣಧರನಂದಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

- Advertisement -

Latest Posts

Don't Miss