Monday, December 23, 2024

Latest Posts

ನನ್ನ ಸರ್ಕಾರದ ತಪ್ಪುಗಳಿದ್ದರೆ ಬರೆಯಿರಿ, ಕಾಗೆ ಸುದ್ದಿ ಬೇಡ: ಮಾಧ್ಯಮಕ್ಕೆ ಸಿಎಂ ಕರೆ

- Advertisement -

Mandya Political News: ಮಂಡ್ಯ: ಕಾಗೆ ಚರ್ಚೆಗಳಿಂದ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ಅದರ ಬದಲು ನನ್ನ ಸರ್ಕಾರದ ತಪ್ಪುಗಳಿದ್ದರೆ ಅದನ್ನು ನೀವು ಬರೆಯಿರಿ, ತೋರಿಸಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಲಹೆ ನೀಡಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು ? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್‌ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದರು. ಆದರೆ, ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಢ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್‌ಗಳು ಮಾಡಬಾರದು ಎಂದರು.

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರಾಮಾಣಿಕವಾಗಿ ಜನರಿಗೆ ಸುದ್ದಿ ತಲುಪಿಸಿ

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಿ ಎಂದು ಸಿಎಂ ಸಿದ್ದರಾಂಯ್ಯ ಕರೆ ನೀಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿ ಎಂದು ಸಲಹೆ ನೀಡಿದರು.

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

- Advertisement -

Latest Posts

Don't Miss