Tuesday, June 3, 2025

Latest Posts

ಲೋಕಸಭೆ ಚುನಾವಣೆಯಲ್ಲಿ ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತ ಹಾಗೆ: ಕುಮಾರಸ್ವಾಮಿ

- Advertisement -

Political News: ಇಂದು ಮಂಡ್ಯದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸಿದ್ದು, ಈ ವೇಳೆ ಮಂಡ್ಯ ಜನರನ್ನು ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತಹಾಗೆ ಎಂದಿದ್ದಾರೆ.

ರಾಜಕೀಯದಲ್ಲಿ ನಮ್ಮಿಂದ ಸಣ್ಣ ಪುಟ್ಟ ತಪ್ಪುಗಳಾಗಿರಬಹುದು. ಅದನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ಆ ತಪ್ಪುಗಳನ್ನು ತಿದ್ದಿಕೊಳ್ಳಲು ನಮಗೆ ಅವಕಾಶ ಮಾಡಿಕೊಡಿ. ನಮ್ಮ ಕೈಯಲ್ಲಿ 5 ವರ್ಷ ಅಧಿಕಾರವಿದ್ದಿದ್ದರೆ, ಮಂಡ್ಯ ಜಿಲ್ಲೆಯ ಅಭಿವೃದ್ಧಿಯ ಮಾತೇ ಬೇರೆ ಇರುತ್ತಿತ್ತು. ಆ ಅವಕಾಶವನ್ನು ಈಗ ಕೊಡಿ ಎಂದು ಹೆಚ್,ಡಿ.ಕುಮಾರಸ್ವಾಮಿ ಮಂಡ್ಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಅಲ್ಲದೇ, ಇವತ್ತು ಕೆಲವರು ಜನತಾ ದಳ ಮುಗಿಸುತ್ತೇವೆ ಎಂದು ಕೂತಿದ್ದಾರೆ. ಅದಕ್ಕೆಲ್ಲ ಉತ್ತರ ನೀವೇ ಕೊಡಬೇಕು. ಈ ಬಾರಿ ನಾವು ನಿಮಗೆ ನಿರಾಸೆ ಮಾಡುವುದಿಲ್ಲ. ಕ್ಷೇತ್ರ ಹಂಚಿಕೆಯ ಬಗ್ಗೆ ಕೆಲವರಲ್ಲಿ ಗೊಂದಲವಿದೆ, ಕೆಲ ದಿನಗಳಲ್ಲೇ ಆ ಗೊಂದಲಗಳಿಗೆ ಉತ್ತರ ಕೊಡುತ್ತೇವೆ. ಈ ಲೋಕಸಭೆ ಚುನಾವಣೆಯಲ್ಲಿ ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ನಾವು ಇದ್ದೂ ಸತ್ತಂತೆ ಅಂತಾ ಭಾವಿಸಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡರು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಶ್ರೀ ಸಿ.ಎಸ್.ಪುಟ್ಟರಾಜು, ಶ್ರೀ ಡಿ.ಸಿ.ತಮ್ಮಣ್ಣ, ಶಾಸಕ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಶ್ರೀ ರವೀಂದ್ರ ಶ್ರೀಕಂಠಯ್ಯ , ಶ್ರೀ ಸುರೇಶಗೌಡ, ಡಾ.ಅನ್ನದಾನಿ, ಶ್ರೀ ಕೆ.ಟಿ.ಶ್ರೀಕಂಠೇಗೌಡ, ಪಕ್ಷದ ಜಿಲ್ಲಾಧ್ಯಕ್ಷ ಶ್ರೀ ರಮೇಶ್, ಶ್ರೀ ರಾಮಚಂದ್ರು, ಶ್ರೀ ಗುರುಚರಣ್, ಶಿವಕುಮಾರ್ ಸೇರಿ ಅನೇಕ ನಾಯಕರು ಉಪಸ್ಥಿತರಿದ್ದರು.

ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ

- Advertisement -

Latest Posts

Don't Miss