Political News: ರಾಮನಗರದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡವನ್ನು ಸ್ಥಗಿತಗ“ಳಿಸಲಾಾಗಿದೆ. ನೀರಿನ ನಿರ್ವಹಣೆ ಸರಿಯಾಗಿಲ್ಲವೆಂದು ಆರೋಪಿಸಿ, ಸ್ಟುಡಿಯೋಗೆ ಬೀಗ ಹಾಕಲಾಗಿದೆ.
ಇದೀಗ ಈ ಸುದ್ದಿಗೆ ರಾಜಕೀಯ ಟಚ್ ನೀಡಿ, ಡಿಕೆಶಿ ಹೇಳಿದ ಹಾಗೆ ಸಿನಿ ರಂಗದವರ ನಟ್ಟು ಬೋಲ್ಟು ಸರಿ ಮಾಡಿದ್ರಾ ಅನ್ನೋ ಪ್ರಶ್ನೆ ಓಡಾಡುತ್ತಿದೆ. ಆದರೆ ಹಾಗೇನೂ ಇಲ್ಲ. ಇದು ಇಲ್ಲ ಸಲ್ಲದ ಆರೋಪ, ನನ್ನ ಬಗ್ಗೆ ಮಾತನಾಡದಿದ್ದರೆ, ಜೆಡಿಎಸ್‌ನವರಿಗೆ ನಿದ್ದೇನೇ ಬರೋದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಬಿಗ್‌ಬಾಸ್ ನಡೆಯುವ ಜಾಲಿವುಡ್ ಸ್ಟುಡಿಯೋ ಬಂದ್ ಮಾಡಲಾಗಿದೆ. ಆದರೆ ಇಲ್ಲಿ ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ, ಉದ್ಯೋಗ ನಡೆಯುವುದು ಮುಖ್ಯ. ಹೀಗಾಗಿ ತಪ್ಪುಗಳನ್ನು ಸರಿಪಡಿಸಿಕೊಂಡು ಹೋಗಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಅಲ್ಲದೇ, ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್‌ಬಾಸ್ ಸ್ಟುಡಿಯೋಗೆ ಬೀಗ ಹಾಕಿದ್ದು, ಇದರಿಂದ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಧಾರಣೆಗೆ ಅವಕಾಶ ನೀಡಲು ಜಿಲ್ಲಾಧಿಕಾರಿಯವರಿಗೆ ಕರೆ ಮಾಡಿ ಸೂಚಿಸಿದ್ದೇನೆ. ತಪ್ಪಾದರೆ ತಿದ್ದಿಕ“ಳ್ಳಲು ಅವಕಾಶ ನೀಡಬೇಕು.
ಇನ್ನು ಈ ಬಗ್ಗೆ ರಾಜಕೀಯ ಮಾಡುತ್ತಿರುವ ದಳದವರಿಗೆ, ನನ್ನ ಬಗ್ಗೆ ಮಾತನಾಡದೇ ಇದ್ದರೆ ನಿದ್ದೆ ಬರಲ್‌ಲ. ಅವರಿಗೆ ರಾಜಕೀಯ ಶಕ್ತಿ ಸಹ ಇಲ್ಲ. ಮಾಡುವುದಕ್ಕೆ ಬೇರೆ ಕೆಲಸ ಇಲ್ಲದೇ ಇದ್ದಾಗ, ಈ ತರಹ ನಾವು ರಾಜಕೀಯವಾಗಿ ಜೀವಂತವಿದ್ದೇವೆಂದು ತೋರಿಸಿಕ“ಳ್ಳಲು ಪ್ರಯತ್ನಿಸುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.