BREAKING: ನಾಳೆ ಬೆಳಿಗ್ಗೆ 11ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತಾಯಗೊಂಡಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ ಪ್ರಕಟಿಸೋದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ನಾಳೆ ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲಾಗುತ್ತಿದೆ.

ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಸಚಿವರು ಪ್ರಕಟಿಸಿದ ಬಳಿಕ, ಅಧಿಕೃತ ಜಾಲತಾಣ www.karresult.nic.inಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳು ನೀಡಿರುವಂತ ಮೊಬೈಲ್ ಸಂಖ್ಯೆಗೂ ಎಸ್ಎಂಎಸ್ ಮೂಲಕ ಫಲಿತಾಂಶ ತಲುಪಲಿದೆ.

About The Author