- Advertisement -
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ ಹಿನ್ನಲೆ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಪ್ರಭಾ ಮಲ್ಲಿಕಾರ್ಜುನ್ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಗ್ಯಾರಂಟಿ ಕಾರ್ಡ್, 1 ಲಕ್ಷ ಕೊಡ್ತಿವಿ ಎಂದು ಮತದಾರರಿಗೆ ಆಮಿಷವೊಡ್ಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯಿದೆಗೆ ವಿರುದ್ಧವಾಗಿದ್ದು ಎಂದು ಗಾಯತ್ರಿ ಅವರು ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಸೆ.19ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಅವರು 6,33,059 ಮತ ಪಡೆದಿದ್ರೆ, ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ಅವರು 6,06,965 ಮತ ಪಡೆದಿದ್ದರು.
- Advertisement -