Sunday, December 22, 2024

Latest Posts

Cattle : ಅಕ್ರಮ ಗೋಸಾಗಾಟ: ಆರೋಪಿಗಳ ಬಂಧನ

- Advertisement -

Belthangadi News: ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ದಳ ಠಾಣೆಯ ಎಸ್‌ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ಈ ಸಂದರ್ಭದಲ್ಲಿ ರಾತ್ರಿ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿವೆ.

ವಾಹನದಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ. ತನಿಖೆ ಮುಂದುವರೆದಿದೆ.

ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Railway-ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನೈರುತ್ಯ ರೈಲ್ವೆ ಜಯಶಾಲಿ

Shourya : ಆಪತ್ತು ತಪ್ಪಿಸಿದ ಸಾಣೂರು ವಿಪತ್ತು ನಿರ್ವಹಣಾ ತಂಡ…!

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

 

- Advertisement -

Latest Posts

Don't Miss