ಸಿಸಿಬಿ ಬಲೆಗೆ ಬಿದ್ದ ಅಕ್ರಮ ಸಾರಾಯಿ ಮಾರಾಟಗಾರ

Dharwad News: ಧಾರವಾಡ: ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮದ್ಯದ ಸಮೇತ ಬಂಧಿಸುವಲ್ಲಿ ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಧಾರವಾಡ ತಾಲೂಕಿನ ಹೊನ್ನಾಪುರ ಗ್ರಾಮದ ಸೋಮಪ್ಪ ಮಿಸಗೇರಿ (27) ಎಂಬ ವ್ಯಕ್ತಿಯೇ ಬಂಧಿತನಾಗಿದ್ದು, ಈತ ಫೆ.29 ರಂದು ಧಾರವಾಡದ ಸಪ್ತಾಪುರದ ಹತ್ತಿರ ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಭಾಗದ ಎಸ್.ಟಿ.ಒಡೆಯರ್ ನೇತೃತ್ವದ ಸಿಸಿಬಿ ಇನ್ಸ್‌ಪೆಕ್ಟ‌ರ್ ಪಿ.ಆ‌ರ್.ಗಂಗೇನಹಳ್ಳಿ ಮತ್ತು ಅವರ ಸಿಬ್ಬಂದಿ ದಾಳಿ ಮಾಡಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 60 ಸಾವಿರ ರೂಪಾಯಿ ಮೌಲ್ಯದ 141.60 ಲೀಟ‌ರ್ ಮದ್ಯ ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ ಇಂಡಿಕಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಒಟ್ಟು 1.6 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಸಿಸಿಬಿ ಪೋಲಿಸರು ವಶಪಡಿಸಿಕೊಂಡು, ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು

ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

About The Author