ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಶನಿವಾರದಂದು ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ, ಆಗ್ನೇಯ ಉತ್ತರ ಪ್ರದೇಶದ ನಾಗಾಲ್ಯಾಂಡ್‌ನ ಸೈಕ್ಲೋನಿಕ್ ಪರಿಚಲನೆಯಿಂದ ಪೂರ್ವ ಪಶ್ಚಿಮ ತೊಟ್ಟಿ, ಉತ್ತರ-ದಕ್ಷಿಣ ಟ್ರಫ್ ಮತ್ತು ಬಂಗಾಳ ಕೊಲ್ಲಿಯಿಂದ ಈಶಾನ್ಯ ಭಾರತದವರೆಗೆ ನೈರುತ್ಯ ಮಾರುತದ ಪರಿಣಾಮದಿಂದಾಗಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.