Monday, December 23, 2024

Latest Posts

ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

- Advertisement -

Political News: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ ಬದಲಾವದಣೆ ಬಗ್ಗೆ ಸಿದ್ದರಾಮಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಕಿತ್ತಾಟ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ.

ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ಕುರಿತು ರಾಜ್ಯ ನಾಯಕರ ಚರ್ಚೆ ಹಾಗೂ ಅಲ್ಲದೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವಿನ ಆಂತರಿಕ ಕಿತ್ತಾಟಗಳಿಗೆ ಬ್ರೇಕ್ ಹಾಕಲು ಹೈಕಮಾಂಡ್ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಣದ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಈ ಬೆಳವಣಿಗೆಗೆ ಬ್ರೇಕ್ ಹಾಕಲು ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರು ಪಂಚ ರಾಜ್ಯ ಚುನಾವಣೆ ಕೆಲಸಗಳನ್ನೂ ಬದಿಗೊತ್ತಿ ಕರ್ನಾಟಕಕ್ಕೆ ದೌಡಾಯಿಸಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

- Advertisement -

Latest Posts

Don't Miss