BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಇಡಿ ವಿಶೇಷ ಕೋರ್ಟ್ ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೆಹಲಿಯಲ್ಲಿನ ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

ಕಳೆದ ಶನಿವಾರದಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿದ ನಂತ್ರ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಸೇರಿದಂತೆ ಐವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ಇಂದು ಈ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿದಂತ ಇಡಿ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದಂತ ವಿಕಾಸ ಧುಲ್ ಅವರು, ಈ ಪ್ರಕರಣದಲ್ಲಿ ಪ್ರತಿಯೊಬ್ಬರಿಗೂ ತಲಾ 1 ಲಕ್ಷ ಬಾಂಡ್ ಶೂರಿಟಿ, ಸಾಕ್ಷ್ಯ ನಾಶಪಡಿಸದಂತೆ, ದೇಶಬಿಟ್ಟು ಹೋಗದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ.

ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ, ರಾಜೇಂದ್ರ ಎನ್ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರಾಗಿದೆ.

About The Author