ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ನಮ್ಮ ಸರ್ಕಾರ ಅನ್ನದಾತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಹಾಗೂ ಕಬ್ಬು ಬೆಳೆಗಾರರ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಬೆಳಗಾವಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ 11.25 ಇಳುವರಿ ಬರುವ, ಪ್ರತಿ ಟನ್ ಕಬ್ಬಿಗೆ ₹3,200 ಕೊಡುವ ನಿರ್ಧಾರಕ್ಕೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದರು. ಈಗ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50 ರೂಪಾಯಿಗಳನ್ನು ಹೆಚ್ಚುವರಿಯಾಗಿ ಸೇರಿಸಿ, ರೈತರಿಗೆ ಟನ್‌ಗೆ ₹3,300 ಕೊಡಲು ತೀರ್ಮಾನಿಸಲಾಗಿದೆ.
ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸವಾಗುತ್ತದೆ. ಆದರೆ, ಇಂದಿನ ಸಭೆಯ ತೀರ್ಮಾನದಂತೆ ಎಲ್ಲಾ ಇಳುವರಿಗೂ 100 ರೂ. ಹೆಚ್ಚಳ ಆಗಲಿದೆ. ನಮ್ಮದು ರೈತ ಪರ ಸರ್ಕಾರವಾಗಿದ್ದು, ಅನ್ನದಾತರಿಗೆ ಎಂದಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

