Hassan News: ಹಾಸನ: ಬಿಜೆಪಿ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಹಾಸನ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತ ಮನು ಎಂಬುವವರು ಹಲ್ಲೆಗೆ ಒಳಗಾಗಿದ್ದು, ಗಾಯಾಳುವಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಗಾಯಾಳು ಮನುವನ್ನು ನೋಡಲು, ಶಾಸಕ ಹೆಚ್.ಪಿ.ಸ್ವರೂಪ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಾಳುವಿನ ಆರೋಗ್ಯ ವಿಚಾರಿಸಿರುವ ಸ್ವರೂಪ್, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು, ಸ್ವರೂಪ್ ಆಗ್ರಹಿಸಿದ್ದಾರೆ. ಅಲ್ಲದೇ, ಪೊಲೀಸರ ನಡೆಗೆ ಗರಂ ಆಗಿರುವ ಸ್ವರೂಪ್, ಕೂಡಲೇ ಕೇಸು ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿರುವ ಶಾಸಕ ಸ್ವರೂಪ್, ಜೆಡಿಎಸ್ ಕಾರ್ಯಕರ್ತ ಬೂವನಹಳ್ಳಿ ಕಾವಲಿನ ಹೊಸೂರು ಗ್ರಾಮದ ಮನು ದೇಹದ ಮೇಲೆ ದೊಡ್ಡ ಮಟ್ಟದಲ್ಲಿ ಗಾಯಗಳಾಗಿದ್ದು, ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಎಲ್ಲಾ ಸೇರಿ ಎಸ್ಪಿ ಅವರಿಗೆ ಮನವಿ ಮಾಡಲಾಗಿದೆ. ಯಾರು ತಪ್ಪಿತಸ್ಥರು ಇದ್ದಾರೆ, ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹವಾಗಿದೆ ಎಂದಿದ್ದಾರೆ.
ಅಲ್ಲದೇ, ಮನು ಮೇಲೆ ಮೂರನೇಯ ಬಾರಿಗೆ ಹಲ್ಲೆ ಆಗಿರುವುದು, ಖಂಡನೀಯ. ಹಾಸನ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳು ಏನಿದೆ, ಇಲ್ಲಿ ಘರ್ಷಣೆ ನಡೆದಿದ್ದರೂ ಸಬ್ ಇನ್ಸ್ ಪೆಕ್ಟರ್ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮುಂದೆ ಏನಾದರೂ ದೊಡ್ಡ ಮಟ್ಟದಲ್ಲಿ ಅನಾಹುತವಾದರೇ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೆ ಕಾರಣರಾಗುತ್ತಾರೆ. ಈ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಡಿವೈಎಸ್ಪಿ ಅವರು ಈ ಸಮಸ್ಯೆಯನ್ನು ಬಗೆಹರಿಸಿ ನ್ಯಾಯಕೊಡಿಸಬೇಕು ಎಂದು ಸ್ವರೂಪ್ ಆಗ್ರಹಿಸಿದ್ದಾರೆ.
ಅಲ್ಲದೇ, ಮನು ಮನೆಯಲ್ಲಿ ಪಕ್ಷದ ಹಬ್ಬ ಮಾಡುತ್ತಿರುವಾಗ ಹಲ್ಲೆ ಮಾಡಿ ಕೊಲೆ ಮಾಡುವ ಯತ್ನ ಮಾಡಿದ್ದಾರೆ. ತಕ್ಷಣದಲ್ಲಿ ತಪ್ಪಿತಸ್ಥರನ್ನು ಬಂಧಿಸುವಂತೆ ನಮ್ಮ ಆಗ್ರಹವಾಗಿದೆ ಎಂದರು ಮುಂದೆ ಇಂತಹ ಘಟನೆಗಳು ನಡೆಯದಿರಲಿ ಎಂದು ಸ್ವರೂಪ್ ಹೇಳಿದ್ದಾರೆ.
ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್ಸ್ಪೆಕ್ಟರ್ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್
ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ
‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’