Political News: ಧಾರವಾಡ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು ರೋಸಿ ಹೋಗಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿಯೊಂದು ವಿಷಯದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುತ್ತಿದೆ. ರೈತ ವಿರೋಧಿ, ಜನ ವಿರೋಧಿ ಆಡಳಿತವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಜಿಟಿಡಿ ಅಸಮಾಧಾನ ಹೊರಹಾಕಿದ್ದಾರೆ.
ಸರ್ಕಾರದ 6ನೇ ಭಾಗ್ಯ ರೈತ ಆತ್ಮಹತ್ಯೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ತೀವ್ರ ಬರಗಾಲದಿಂದ ರೈತರು ರೋಸಿ ಹೋಗಿದ್ದಾರೆ. ವಿದ್ಯುತ್ ಇಲ್ಲದೇ ಬೆಳೆ ಹಾನಿ ಆಗಿದೆ. ಹಣ ಕೊಟ್ಟು ವಿದ್ಯುತ್ ಖರೀದಿ ಮಾಡೋದು ಬಿಟ್ಟು ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡುತ್ತಿದೆ. ಕೇವಲ ಐದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ವಿಫಲತೆ ಕಾಣುತ್ತಿದೆ ಎಂದು ಜಿಟಿಡಿ ಹೇಳಿದ್ದಾರೆ.
ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ
‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ JDS ಅಸೆಂಬ್ಲಿ ಚುನಾವಣೆ ಸೋತಿದ್ದು’
ಗಬ್ಬೂರಿನ ಹೆದ್ದಾರಿಯಲ್ಲಿ ತೀವ್ರಗೊಂಡ ಹೋರಾಟ: ಪಂಚಮಸಾಲಿ ಗುಡುಗಿದರೇ ವಿಧಾನಸೌಧ ನಡುಗುವುದು