Hassan News: ಹಾಸನ: ಹೇಮಾವತಿಯಿಂದ ತುಮಕೂರಿಗೆ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಚಿವ ರೇವಣ್ಣ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ.
ಹಾಸನದಲ್ಲಿ ಜಿಲ್ಲಾ ಜೆಡಿಎಸ್‌ನವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ , ಹೊಳೆನರಸೀಪುರಕ್ಕೂ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ. ಜನ, ಜಾನುವಾರುಗಳಿಗೆ ಅನುಕೂಲ ಮಾಡುವಂತೆ ಆಗ್ರಹಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಸೇರಿ ವಿವಿಧ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಹೇಮಾವತಿ ಜಲಾಶಯದಿಂದ ತಮಕೂರು ವರೆಗೆ ನಾಲೆ ಸುತ್ತ 144ಸೆಕ್ಷನ್ ಜಾರಿ ಮಾಡಲಾಗಿದೆ. ಹೇಮಾವತಿ ಜಲಾಶಯದ ಎಡದಂಡೆ ನಾಲೆಯ ಬಲ ಮತ್ತು ಎಡ ಭಾಗದ 100ಮೀಟರ್ ವರೆಗೆ ಸೆ.144 ಜಾರಿ ಮಾಡಿ, ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶ ಹೊರಡಿಸಿದ್ದಾರೆ.
ಈ ಕ್ರಮಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭಾರಿ ವಿರೋಧ ವ್ಯಕ್ತಪಡಿಸಿದ್ದು, ನನ್ನ 25 ವರ್ಷ ರಾಜಕೀಯ ಅನುಭವದಲ್ಲಿ ಸೆ.144 ಹಾಕಿ ನೀರು ಬಿಟ್ಟಿಲ್ಲ. ತುಮಕೂರಿಗೂ ನೀರು ಹರಿಸಲಿ, ಬೇಡ ಅನ್ನೊಲ್ಲ. ಆದ್ರೆ ಹಾಸನ ಜಿಲ್ಲೆಯ ತಾಲ್ಲೂಕುಗಳಿಗೂ ನೀರು ಬಿಡಬೇಕು. ನೀರಿಗಾಗಿ ಹೋರಾಟ ಮಾಡುತ್ತೇವೆ. ಏನಾದರೂ ಹೆಚ್ಚು ಕಮ್ಮಿ ಆದ್ರೆ ಜಿಲ್ಲಾಡಳಿತವೇ ಹೊಣೆ. ಎ-1 ಡಿಸಿ, ಎ2 ಎಸ್ಪಿ ಆಗುತ್ತಾರೆ. ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ರು, ಹಾಸನ ಡಿಸಿ ಮೇಡಂ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.
3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!
ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.
ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ




