Saturday, November 8, 2025

Latest Posts

ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದಹನ

- Advertisement -

ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್‌ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಕಾವೇರಿ ಸ್ಲೀಪರ್‌ ಬಸ್‌ ಛತ್ತೀಸ್‌ಗಢದಲ್ಲಿ ನೋಂದಣಿ ಮಾಡಿಸಲಾಗಿದೆ.

ಬಸ್‌ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ, ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿಗಳು, ಭೀಕರ ಬಸ್ ಅಗ್ನಿ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. PMNRF ನಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಮತ್ತು ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕೂಡ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ, ಕರ್ನೂಲ್‌ ಜಿಲ್ಲಾಸ್ಪತ್ರೆ ವೈದ್ಯರಿಗೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದು, ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

Latest Posts

Don't Miss