Hubli News: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನನ್ನು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಲೋಹಿಯಾನಗರದಲ್ಲಿ ನಡೆದಿದೆ. ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಪುತ್ರ ಆಕಾಶ ಮಠಪತಿ (26) ಎಂಬುವರೇ ಸಾವನ್ನಪ್ಪಿದ ದುರ್ದೈವಿ.
ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ ಬಳಿಯಲ್ಲಿ ಹೋಗಿದ್ದ ಸಂದರ್ಭದಲ್ಲಿ ತಲೆಗೆ ಏಟಾಗಿ ಅಸ್ವಸ್ಥ ರೀತಿಯಲ್ಲಿ ಬಿದ್ದಿದ್ದ ಎಂದು ತಿಳಿದು ಬಂದಿದೆ. ಅಸ್ವಸ್ಥಗೊಂಡಿದ್ದ ಆಕಾಶನನ್ನು ಸ್ಥಳೀಯರ ಮಾಹಿತಿ ಮೇರೆಗೆ ಕುಟುಂಬಸ್ಥರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ.
ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಸಾವನ್ನಪ್ಪಿದ್ದಾನೆ ಎಂದು ಕಿಮ್ಸ್ ವೈದ್ಯರು ಮಾಹಿತಿ ನೀಡಿದ್ದಾರೆ.
ಘಟನೆ ನೋಡಿದರೆ ಕೊಲೆಯ ಶಂಕೆ ವ್ಯಕ್ತವಾಗಿದ್ದು, ಆಕಾಶನ ತಾಯಿ ಹಾಗೂ ತಂದೆ ಶೇಖರಯ್ಯಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗನನ್ನು ಆತನ ಸ್ನೇಹಿತರೇ ಕೊಲೆ ಮಾಡಿದ್ದಾರೆ ಆರೋಪಿಸಿದ್ದಾರೆ. ಹತ್ಯೆ ಮಾಡಿದವರು ಯಾರು? ಘಟನೆ ಕಾರಣ ಏನು ಎಂಬುದನ್ನು ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.
ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮಾಡಿದ್ದು, ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದ್ದು ಕಂಡು ಬಂದಿತು. ಡಿಸಿಪಿ ಕುಶಾಲ್ ಚೌಕ್ಸೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಸುರೇಶ್ ಯಳ್ಳೂರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಾಥಮಿಕ ತನಿಖೆಯಲ್ಲಿ ತಲೆಗೆ ಗಾಯವಾಗಿರುವ ಹಿನ್ನಲೆ ಆಕಾಶ ಸಾವನ್ನಪ್ಪಿದ್ದಾನೆ : ಕಮೀಷನರ್..
ಪ್ರಾಥಮಿಕ ತನಿಖೆಯಲ್ಲಿ ಆಕಾಶ ಮಠಪತಿ ತಲೆಗೆ ಗಾಯವಾಗಿರೋದು ತಿಳಿದು ಬಂದಿದೆ, ಬೇರೆ ಕಡೆಗೆ ಗಾಯವಾಗಿಲ್ಲ. ಆಕಾಶ ತಂದೆ ಶೇಖರಯ್ಯಾ ಮಠಪತಿ ಅವರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಆಕಾಶ ಸ್ನೇಹಿತರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದರು.
ನಗರದಲ್ಲಿ ಕಿಮ್ಸ್ ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇಖರಯ್ಯಾ ಮಠಪತಿ ಅವರು ಆಕಾಶನ ಆರು ಜನರ ಸ್ನೇಹಿತರ ಮೇಲೆ ಆರೋಪ ಮಾಡಿದ್ದಾರೆ. ನಾವು ಎಲ್ಲಾ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಆಕಾಶ ತಂದೆ ಯಾರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೋ ಅವರನ್ನು ಕರೆದು ವಿಚಾರಣೆ ನಡೆಸಲಾಗುವುದು ಎಂದರು.
ಮೃತನ ತಾಯಿ ಅನ್ನಪೂರ್ಣ ಮಾತನಾಡಿ, ನಾವು ನಮ್ಮ ಮಗ ಕೆಲಸಕ್ಕೆ ಹೋಗಿದ್ದಾನೆ ಎಂದು ತಿಳಿದುಕೊಂಡಿದ್ದೇವು. ಆದ್ರೆ ಎರಡು ಗಂಟೆಗೆ ಫೋನ್ ಸ್ವಿಚ್ ಆಫ್ ಆಗಿದೆ. ಗಿರಿನಗರದ ಕಡೆ ಕರೆದುಕೊಂಡು ತಲೆಗೆ ಹೊಡೆದುಕೊಲೆ ಮಾಡಿದ್ದಾರೆ. ಕೊಲೆ ಹಿಂದೆ ನಾಲ್ಕೈದು ಜನ ಇದ್ದಾರೆ ಎಂದು ಆರೋಪಿಸಿದ್ದಾರೆ.
Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್..