Friday, November 8, 2024

Latest Posts

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟನೆ: ಸಂಸದೆ ಸುಮಲತಾ ಅಂಬರೀಷ್ ಭಾಗಿ

- Advertisement -

Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS) ನಿರ್ಮಿಸಿರುವ ಬೃಹತ್​ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಆಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ.

ವಸುದೈವ ಕುಟುಂಬಕಂ ಸಿದ್ಧಾಂತವನ್ನು ಯಾವಾಗಲೂ ಪ್ರತಿಪಾದಿಸುವ, ಜಗತ್ತೇ ಮೆಚ್ಚುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟಿಸಿ, ಅಬುಧಾಬಿಯಲ್ಲಿ ಆಡಿದ ಸ್ಪೂರ್ತಿದಾಯಕ ಮಾತುಗಳು ಯುಎಇ ಮತ್ತು ಭಾರತದ ನಡುವಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತರುವುದರಲ್ಲಿ ಎರಡು ಮಾತಿಲ್ಲ.ಇಂತಹ ಪ್ರಧಾನಿ ಪಡೆದಿರುವುದು ನಮ್ಮೆಲ್ಲರ ಪುಣ್ಯ.
ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆಯಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ BAPS ಸಂಸ್ಥೆಯ ಸರ್ವರಿಗೂ ಮನತುಂಬಿದ ಕೃತಜ್ಞತೆಗಳು ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ರಾಕ್ ಲೈನ್ ವಿರುದ್ಧ “ದೊಡ್ಡ” ಷಡ್ಯಂತ್ರ..?

ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ

ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss