ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ 250 ಹಾಸಿಗೆಗಳ ವಸತಿ ನಿಲಯ ನಿರ್ಮಿಸಲಾಗಿದ್ದು, ನಿಲಯದ ಉದ್ಘಾಟನೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾಂದನಾಥ ಸ್ವಾಮೀಜಿ ವಸತಿ ನಿಲಯ ನೆರವೇರಿಸಲಿದ್ದಾರೆ ಎಂದರು.
ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..
ಮುಖ್ಯ ಅತಿಥಿಗಳಾಗಿ ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಶಿವಲಿಂಗೇಗೌಡ, ಗಿರೀಶ್, ಗಂಗಾಧರ್ ಇತರರು ಹಾಜರಿದ್ದರು.