Tuesday, July 22, 2025

Latest Posts

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

- Advertisement -

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ. ದೇಶದಲ್ಲಿ ಕೋವಿಡ್ -19 (covid-19) ಪರಿಸ್ಥಿತಿ ಬಿಗಡಾಯಿಸುತ್ತಿರುವುದು ಮತ್ತು ಅದನ್ನು ಸಾಮೂಹಿಕವಾಗಿ ಎದುರಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸೋಂಕಿತ ವ್ಯಕ್ತಿಗಳಿಂದ ಇತರರಿಗೆ ಸೋಂಕು ಹರಡವುದನ್ನು ತಪ್ಪಿಸಲು ಪರೀಕ್ಷೆಗಳನ್ನು ಹೆಚ್ಚಿಸುವಂತೆ ಕೇಂದ್ರವು ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಸಭೆ ನಡೆಸುವ ತೀರ್ಮಾನ ಕೈಗೊಂಡಿರುವುದು ಪ್ರಾಮುಖ್ಯತೆ ಪಡೆದಿದೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಖಚಿತಪಡಿಸಿದ್ದಾರೆ.

- Advertisement -

Latest Posts

Don't Miss