Saturday, July 27, 2024

Latest Posts

ಕೊರೊನಾ ಸೋಂಕು ನಡುವೆ ಡೆಂಗ್ಯೂ ಹೆಚ್ಚಳ..!

- Advertisement -

ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ.

ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮುಂಗಾರು ಋತುವಿನಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಮತ್ತು ಝಿಕಾ ವೈರಸ್ ರೋಗಕ್ಕೆ ಕಾರಣವಾಗಿರುವ ಈಡಿಸ್ ಸೊಳ್ಳೆ ಸಂತಾನೋತ್ಪತ್ತಿಯನ್ನು ತಗ್ಗಿಸುವ ನಿಟ್ಟಿನಲ್ಲಿ, ವಹಿಸಬೇಕಾದ ಕ್ರಮಗಳ ಬಗ್ಗೆ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಸಹಾಯಕರಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರಲ್ಲಿ ಪ್ರತಿನಿತ್ಯ ಜಾಗೃತಿ ಮೂಡಿಸುವಂತೆ ಸೂಚಿಸಲಾಗಿದೆ.

ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವಂತೆ ಎಲ್ಲಾ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ವಾಣಿಜ್ಯ ಸಂಸ್ಥೆಗಳು ಸೇರಿದಂತೆ ಎಲ್ಲಾ ಸಹಕಾರಿ ಮತ್ತು ಖಾಸಗಿ ಕಛೇರಿ ಕಟ್ಟಡಗಳಲ್ಲಿ ಈಡಿಸ್ ಸೊಳ್ಳೆ ಸಂತಾನೋತ್ಪತ್ತಿ ಸ್ಥಳಗಳನ್ನು ಪರಿಶೀಲಿಸಿ, ಅಂತಹ ಸ್ಥಳಗಳನ್ನು ಸ್ವಚ್ಛಗೊಳೊಸುವಂತೆಯೂ ಸೂಚಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದುವರೆಗೆ 388 ಪ್ರಕರಣಗಳು ವರದಿಯಾಗಿದ್ದರೆ, ಉಡುಪಿ 217, ಮೈಸೂರಿನಲ್ಲಿ 171 ಹಾಗೂ ಚಿತ್ರದುರ್ಗದಲ್ಲಿ105 ಮತ್ತು ಕೊಪ್ಪಳದಲ್ಲಿ 94 ಪ್ರಕರಣಗಳು ವರದಿಯಾಗಿದೆ. ಈ ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಜನವರಿಯಿಂದ ಮೇ ವರೆಗೆ ಗಮನಾರ್ಹ ಏರಿಕೆಯಾಗಿವೆ.

 

- Advertisement -

Latest Posts

Don't Miss