ಟ್ರಿನಿಡಾಡ್ : ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ.
ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಶಿಖರ್ ಧವನ್ ನೇತೃಥ್ವದ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದೆ.
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಂತರ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ವಿರಾಟ್ ಕೊಹ್ಲಿ, ಮೊಹ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಆಂಗ್ಲರ ವಿರುದ್ಧ ಟೆಸ್ಟ್ ಮತ್ತು ಟಿ20 ಆಡದ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ.
ಆರಂಭಿಕ ಬ್ಯಾಟರ್ ಮೂರು ಆಯ್ಕೆಗಳಿದ್ದು ನಾಯಕ ಧವನ್ ಇಶಾನ್ ಕಿಶನ್, ಶುಭಮನ್ ಗಿಲ್ ಹಾಗೂ ಋತುರಾಜ್ ಗಾಯಕ್ವಾಡ್ ಇದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಈ ಜೋಡಿ ಆಂಗ್ಲರ ವಿರದ್ಧ ಶತಕ ಸಿಡಿಸಿತ್ತು.
ಇನ್ನು ಪ್ಲೇಯಿಂಗ್ ಇಲೆವೆನ್ ನಲ್ಲಿ ಶ್ರೇಯಸ್ ಅಯ್ಯರ್ ಗೆ ಅವಕಾಶ ಕೊಡುವದೋ ಅಥವಾ ಸಂಜು ಸ್ಯಾಮ್ಸನ್ ಗೆ ಅವಕಾಶ ಕೊಡುವುದರ ಕುರಿತು ಗೊಂದಲಗಳಿವೆ.
ವಿಶ್ರಾಂತಿಯಲ್ಲಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಆಡುವ ಸಾಧ್ಯತೆ ಇದ್ದು ಪರೀಕ್ಷೆಗೆ ಒಳಪಡಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಯಜ್ವಿಂದರ್ ಚಾಹಲ್ ಮತ್ತು ಅಕ್ಷರ್ ಪಟೇಲ್ ನಡುವೆ ಸ್ಪರ್ಧೆ ಇದೆ.ಮೊಹ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ ಬೌಲರ್ ಗಳಾಗಿ ಕಣಕ್ಕಿಳಿಯಲಿದ್ದಾರೆ. ಅರ್ಷದೀಪ್ ಕೂಡ ಆಡುವ ಸಾಧ್ಯತೆ ಇದೆ.
ಇನ್ನು ವೆಸ್ಟ್ ಇಂಡೀಸ್ ಇತ್ತಿಚೆಗೆ ಬಾಂಗ್ಲಾ ವಿರುದ್ಧ ತವರಿನಲ್ಲೆ ಸೋತು ಮುಖಭಂಗ ಅನುಭವಿಸಿತ್ತು. ಅನುಭವಿ ಜಾಸನ್ ಹೋಲ್ಡರ್ ತಂಡಕ್ಕೆ ಮರಳಿರುವುದು ತಂಡದ ಪ್ಲಸ್ ಪಾಯಿಂಟ್ ಆಗಿದೆ.
ಕಳೆದ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ಭಾರತ ವಿರುದ್ಧ ಕ್ಲೀನ್ ಸ್ವೀಪ್ ಆಗಿತ್ತು. 2019ರ ವಿಶ್ವಕಪ್ ನಂತರ 39 ಇನ್ನಿಂಗ್ಸ್ ಗಳಲ್ಲಿ 6 ಬಾರಿ ಮಾತ್ರ 50 ಓವರ್ ಬ್ಯಾಟ್ ಮಾಡಿದೆ.
ಸಂಜೆ 7ಕ್ಕೆ ಭಾರತೀಯ ಕಾಲಮಾನ