74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ. ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.

ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸುವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ಹೆಚ್ಚು ವಿದ್ಯಾರ್ಥಿಗಳು ನವ ನವೀನ ರೀತಿಯಲ್ಲಿ ತ್ರಿವರ್ಣ ಧ್ವಜ ಬಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾಗಿದೆ. ಈ ಬಾರಿ ಕರೋನಾ ಮಹಾಮಾರಿಯಿಂದ ಕೆಲಸ ಮಾಡಿದ ವಾರಿಯರ್ಸ್ ಗಳಿಗೆ ಸನ್ಮಾನ ಹಾಗೂ ಪೊಲೀಸ್ ವೃಂದ ಹಾಗೂ ವೈದ್ಯಕೀಯ ವೃಂದ ಹಾಗೂ ಹಾಗೂ ಸೋಶಿಯಲ್ ವರ್ಕರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು ಹಾಗೂ ಆಂಬ್ಯುಲೆನ್ಸ್ ಡ್ರೈವರ್ ಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಸನ್ಮಾನ ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಮ್ಮ ಕಾಲೇಜಿನ ಆಡಳಿತ ಮಂಡಳಿ ಈ ಬಾರಿಯೂ ವೈಶಿಷ್ಟ್ಯಪೂರ್ಣವಾಗಿ ಸ್ವಾತಂತ್ರ್ಯ ದಿನ ಆಚರಿಸಿದೆ. ಇದು ನಮಗೆಲ್ಲಾ ಹೆಮ್ಮೆಯ ಸಂಗತಿ ಎಂದರು.
ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ರಾಮಕೃಷ್ಣ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯ ಪ್ರಾಮುಖ್ಯತೆ ಹಾಗೂ ಈ ಬಾರಿ ಎಲ್ಲಾ ಹುತಾತ್ಮರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸುವ ಸ್ವಾತಂತ್ರ್ಯ ದಿನಾಚರಣೆ ಬಂದಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ ಎಂದರು. ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥೆಯ ಅಧ್ಯಕ್ಷ ಜಿ. ದಯಾನಂದ್, ನಿರ್ದೇಶಕ ಡಿ.ಜಿ.ಮನೋಜ್, ಸಪ್ತಗಿರಿ ಆಡಳಿತ ಮಂಡಳಿಯ ಶಶಾಂಕ್ ಕೆ.ಆರ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಿಯಾಂಕಾ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




