ದೆಹಲಿಯಲ್ಲಿ ಮುಂದುವರೆದ ‘ಇಂಡಿಯಾ’ ಮೈತ್ರಿ: ಕಾಂಗ್ರೆಸ್, ಎಎಪಿ ಸೀಟು ಹಂಚಿಕೆ ಫೈನಲ್

National Political News: ಪಂಜಾಬ್‌ನಲ್ಲಿ ನಾವು ಏಕಾಂಗಿ ಹೋರಾಟ ಮಾಡುತ್ತೇವೆ ಎಂದು ಆಪ್ ಸರ್ಕಾರ, ಇಂಡಿಯಾ ಮೈತ್ರಿ ಕೂಡ ತೊರೆದಿತ್ತು. ದೆಹಲಿಯಲ್ಲಿಯೂ ಆಪ್ ಇದೇ ನಿರ್ಧಾರ ತೆಗೆದುಕೊಳ್ಳಬೇಕು ಎಂದಿತ್ತು. ಆದರೆ ಇದೀಗ ಕಾಂಗ್ರೆಸ್ ಮತ್ತು ಎಎಪಿ ಸೀಟು ಹಂಚಿಕೆ ಫೈನಲ್ ಆಗಿದ್ದು, ದೆಹಲಿಯಲ್ಲಿ ಇಂಡಿಯಾ ಮೈತ್ರಿ ಮುಂದುವರೆದಿದೆ. ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಗೆ ಆಪ್ ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಲಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಕುಲ್ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ದೆಹಲಿಯಲ್ಲಿರುವ 7 ಲೋಕಸಭೆಯ ಪೈಕಿ 4 ಲೋಕಸಭಾ ಕ್ಷೇತ್ರದಲ್ಲಿ ಆಪ್ ಸ್ಪರ್ಧಿಸುತ್ತದೆ. 3 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ. ಗುಜರಾತ್‌ನಲ್ಲಿ 24 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, 2 ಕ್ಷೇತ್ರದಲ್ಲಿ ಆಪ್ ಸ್ಪರ್ಧಿಸಲಿದೆ. ಮೈತ್ರಿಗೆ ದೇಶ ಮುಖ್ಯ. ಪಕ್ಷವಲ್ಲ ಎಂದರು.

ಬಂಗಾಳ, ಕಾಶ್ಮೀರ ಮತ್ತು ಬಿಹಾರ್‌ನಲ್ಲಿ ಮೈತ್ರಿ ಮುರಿದು ಬಿದ್ದಿದ್ದು, ಮಮತಾ ಬ್ಯಾನರ್ಜಿ ಸೇರಿ ಹಲವು ನಾಯಕರು ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆಂದು ಕಾಂಗ್ರೆಸ್‌ಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದಾರೆ. ಉತ್ತರಪ್ರದೇಶದಲ್ಲಿ 80 ಕ್ಷೇತ್ರಗಳಲ್ಲಿ ಕೇವಲ 17 ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ಒಪ್ಪಿಗೆ ಸೂಚಿಸುವ ಮೂಲಕ, ಸಮಾಜವಾದಿ ಪಾರ್ಟಿಯ ಷರತ್ತನ್ನು ಒಪ್ಪಿಕೊಂಡಿದೆ.

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

ಬೈಕ್ ರೈಡ್ ಮೂಲಕ ಕಾಶ್ಮೀರಕ್ಕೆ ಸೊಲೋ ಟ್ರಿಪ್: ಹೊಸ ದಾಖಲೆ ಬರೆದ ಧಾರವಾಡ ಯುವತಿ

About The Author