International News : ಭಾರತ ವಿರೋಧಿ ಚಟುವಟಿಕೆಗಳಿಗೆ ಆಸ್ಪದ ಕೊಡದಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಒಂದೇ ಮಾತಿಗೆ ಕುಪಿತಗೊಂಡಿರುವ ಕೆನಡಾದ ಉಪಟಳಗಳಿಗೆ ಭಾರತ ತಕ್ಕ ತಿರುಗೇಟು ನೀಡುತ್ತಿದೆ.
ಕೆನಡಾದಲ್ಲಿರುವ ಭಾರತದ ರಾಯಭಾರಿಯ ಉಚ್ಚಾಟನೆಗೆ ಪ್ರತಿಯಾಗಿ ಭಾರತದಲ್ಲಿರುವ ಕೆನಡಾ ರಾಯಭಾರಿಯ ಉಚ್ಚಾಟನೆ ಮಾಡಲಾಗಿತ್ತು. ಈಗ ಕೆನಡಾದ ಪ್ರಯಾಣ ಮಾರ್ಗಸೂಚಿಗೆ ಪ್ರತಿಯಾಗಿ ಭಾರತ ಕೂಡ ಕೆನಡಾದಲ್ಲಿರುವ ಭಾರತೀಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರಯಾಣ ಮಾರ್ಗಸೂಚಿ ಹೊರಡಿಸಿದೆ.
ಕೆನಡಾದಲ್ಲಿ ಭಾರತ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿವೆ. ರಾಜಕೀಯ ಪ್ರೇರಿತ ಅಪರಾಧಗಳು ಮಿತಿಮೀರಿವೆ. ಹಿಂಸಾಚಾರವು ದಿನೇದಿನೆ ಜಾಸ್ತಿಯಾಗುತ್ತಿದೆ. ಅದರಲ್ಲೂ, ಕೆನಡಾದಲ್ಲಿರುವ ಭಾರತೀಯರು ಹಾಗೂ ಭಾರತದ ರಾಜತಾಂತ್ರಿಕ ಅಧಿಕಾರಿಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.
ಹಾಗಾಗಿ ಕೆನಡಾದಲ್ಲಿರುವ ಭಾರತೀಯರು ಕೆನಡಾದಲ್ಲಿರುವ ಹಿಂಸಾತ್ಮಕ ಪ್ರದೇಶಗಳಿಗೆ ಭೇಟಿ ನೀಡಬಾರದು. ಹಾಗೆಯೇ, ಕೆನಡಾಗೆ ತೆರಳುವ ಭಾರತೀಯರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಹಾಗೆಯೇ, ಕೆನಡಾದಲ್ಲಿರುವ ಭಾರತದ ರಾಯಭಾರಿಗಳ ಜತೆ ಸಂಪರ್ಕದಲ್ಲಿರಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.
Crypto currency; ಚಿಕ್ಕ ವಯಸ್ಸಿಗೆ ಕೋಟಿಗಟ್ಟಲೆ ಹಣ ಕಳೆದುಕೊಂಡ ಯುವಕ..!ಎಷ್ಟು ಗೊತ್ತಾ?
south korea: ಮಗಳನ್ನು ಹಿಂಬಾಲಿಸಿದ ತಾಯಿಗೆ ಆರು ತಿಂಗಳ ಜೈಲು ಶಿಕ್ಷೆ..!