- Advertisement -
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389 ಜನರು ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಸಿಕೊಂಡ ಅವರ ಸಂಖ್ಯೆ 3,34,21,803 ರಷ್ಟಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹಲವಾರು ರಾಜ್ಯಗಳು ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದು , ಕೆಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
- Advertisement -