- Advertisement -
ಸಂಸತ್ ಅಧಿವೇಶವಾದ ಮೊದಲ ದಿನವೇ ವಿಪಕ್ಷಗಳು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಶುರುವಾಗಿವೆ.
ಸಂಸತ್ ಹೊರಾಂಗಣದಲ್ಲಿ ಪ್ರತಿಭಟನೆ ನಡೆಸಿದ ವಿಪಕ್ಷಗಳು, ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು, ಬಿಜೆಪಿಯವರು ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ. ಸಂವಿಧಾನ ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ಸಂವಿಧಾನವನ್ನು ಹಾಳು ಮಾಡಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂದು ಎಲ್ಲ ಪಕ್ಷಗಳ ನಾಯಕರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿ ತುರ್ತು ಪರಿಸ್ಥಿತಿಯ ಬಗ್ಗೆ 100 ಬಾರಿ ಹೇಳುತ್ತಾರೆ. ಆದರೆ ತುರ್ತು ಪರಿಸ್ಥಿತಿ ಘೋಷಿಸದೆ ನೀವು 10 ವರ್ಷಗಳಿಂದ ತುರ್ತು ಪರಿಸ್ಥಿತಿಯನ್ನು ನಿರ್ಮಿಸಿದ್ದೀರಿ. ತರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಾ ಎಷ್ಟು ದಿನ ಆಡಳಿತ ನಡೆಸುತ್ತೀರಿ?” ಎಂದು ಖರ್ಗೆ ಪ್ರಶ್ನಿಸಿದರು.
- Advertisement -