ನವದೆಹಲಿ: ಹರಾರೆಯಲ್ಲಿ ಆಗಸ್ಟ್ 18 ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ, ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ.
3 ಏಕದಿನ ಪಂದ್ಯಗಳಿಗೆ ಭಾರತ ತಂಡ ಇಂತಿದೆ
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.




