ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸುತ್ತಿದ್ದು, ಇಂದು ಗೆಲುವು ದಾಖಲಿಸುವ ತಂಡ ಫೈನಲ್ ಪ್ರವೇಶಿಸಲಿದೆ.
ಈ ಹಿಂದೆ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದ ರದ್ದಾದ ಕಾರಣ, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿತ್ತು. ಅಭ್ಯಾಸ ಪಂದ್ಯದಲ್ಲಿ ಕಿವೀಸ್ ಎದುರು ಸೋಲು ಅನುಭವಿಸಿದ್ದ ಕೊಹ್ಲಿ ಪಡೆ, ಇಂದು ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ. ಓಪನರ್ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ ಮತ್ತು ಕೆ ಎಲ್ ರಾಹುಲ್ ರಿಂದ ಮತ್ತೊಂದು ದೊಡ್ಡ ಇನಿಂಗ್ಸ್ ನಿರೀಕ್ಷಿಸಲಾಗಿದೆ.
ಉಳಿದಂತೆ ಮಿಡಲ್ ಆರ್ಡರ್ ನಲ್ಲಿ ವಿರಾಟ್ ಕೊಹ್ಲಿ, ರಿಷಬ್ ಪಂತ್, ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಜವಾಬ್ದಾರಿ ಹೊರಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್, ಜೆಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಉತ್ತಮ ದಾಳಿ ಸಂಘಟಿಸುವ ಜವಾಬ್ದಾರಿ ಹೊಂದಿದ್ದಾರೆ. ಇನ್ನೂ ನ್ಯೂಜಿಲೆಂಡ್ ಪಡೆಯಲ್ಲಿ ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್ ರಂತ ಅಪಾಯಕಾರಿ ಬೌಲರ್ ಗಳಿದ್ದು, ಕೊಹ್ಲಿ ಪಡೆಗೆ ಸವಾಲಾಗಲಿದ್ದಾರೆ.
ನಂದನ್ ಸ್ಪೋರ್ಟ್ಸ್ ಬ್ಯೂರೋ ಕರ್ನಾಟಕ ಟಿವಿ